ನವೆಂಬರನಲ್ಲಿ ಸರ್ಕಾರ ಪತನವಾಗುತ್ತದೆ ಎನ್ನುವುದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಯಾಕಂದರೆ ಸರ್ಕಾರಕ್ಕೆ ಸಂಪೂರ್ಣ ಬಹುಮತದ ಆಶೀರ್ವಾದ ಮಾಡಿದ್ದಾರೆ ವಾಮ ಮಾರ್ಗದ ಮೂಲಕ ಸರ್ಕಾರ ರಚನೆಯ ಪ್ರಶ್ನೆಯೇ ಇಲ್ಲ ನಾವು ವಿಪಕ್ಷದ ಸ್ಥಾನದಲ್ಲಿ ಕುಳಿತಿದ್ದೇವೆ ಮೂರು ವರ್ಷ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಸಿಎಂ ಸ್ಥಾನದಿಂದ ಯಾರು ಕೆಳಗಿಳುತ್ತಾರೆ ಮುಂದೆ ಯಾರು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಕೆಪಿಸಿಸಿ ಅಧ್ಯಕ್ಷರ ಕುರ್ಚಿ ಮೇಲೆ ಯಾರು ಕಣ್ಣಿಟ್ಟಿದ್ದಾರೊ ಅದು ನಮಗೆ ಬೇಕಿಲ್ಲದ ವಿಚಾರ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದಿಂದ ಸರ್ಕಾರ ರಚನೆ ಮಾಡಿದೆ ಮಾತು ಎತ್ತಿದರೇ ಗ್ಯಾರಂಟಿ ಅಂತಾರೆ ಪ್ರಣಾಳಿಕೆಯಲ್ಲಿ ಅವರೇ ಗ್ಯಾರಂಟಿ ಹೇಳಿದರು ಇದುವರೆಗೂ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೋಳಿಸಿಲ್ಲ ಒಂದಿಷ್ಟು ಸಂದರ್ಭ ಸನ್ನಿವೇಶಗಳಲ್ಲಿ ತಮ್ಮ ಸಮುದಾಯದ ನಾಯಕರುಗಳಿಗೆ ಅವಕಾಶ ಸಿಗಲಿ ಎನ್ನುವ ಉದ್ದೇಶಕ್ಕೆ ಧಾರ್ಮಿಕ ಗುರುಗಳು ಭಾವನೆ ವ್ಯಕ್ತ ಪಡಿಸಿದ್ದರಲ್ಲಿ ತಪ್ಪೇನಿಲ್ಲ ಎಂದರು