ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಬೆಳಗಾವಿ,ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರನ್ನ ದಾವಣಗೆರೆ ನಗರದಲ್ಲಿ ಜರುಗಿದ ವೀರಶೈವ ಪಂಚಪೀಠಗಳ ಮತ್ತು ಶಿವಾಚಾರ್ಯರ ಸೃoಗಸಮ್ಮೇಳನದಲ್ಲಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶ್ರೀಮದ್ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು, ಶ್ರೀ ಉಜ್ಜಯಿನಿ ಜಗದ್ಗುರು
ಸಿದ್ದಲಿಂಗ ರಾಜ ದೇಸಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳವರು, ಕೇದಾರ ಪೀಠದ ಶ್ರೀ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಮಹಾಸ್ವಾಮಿಗಳವರು, ಶ್ರೀ ಡಾ. ಚೆನ್ನಸಿದ್ದರಾಮ ಪಂಡಿತಾರಾಧ್ಯ ಜಗದ್ಗುರುಗಳು ಶ್ರೀಶೈಲ ಪೀಠ, ಶ್ರೀ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರು ಕಾಶಿ ಪೀಠ, ಇವರ ಸಾನಿಧ್ಯದಲ್ಲಿ ಶ್ರೀಗಳನ್ನು ಆಯ್ಕೆ ಮಾಡಲಾಯಿತು.
ಅಧಿಕಾರವನ್ನು ಸ್ವೀಕರಿಸಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಶಿವಾಚಾರ್ಯ ಸಂಸ್ಥೆ ಪೀಠಾಚಾರ್ಯರ ಆಜ್ಞೆಯಂತೆ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ನಮ್ಮನ್ನು ಮೂರು ವರ್ಷಗಳ ಅವಧಿಯೊಳಗೆ ಸಮರ್ಪಕವಾಗಿ ಕಾರ್ಯವನ್ನು ಮಾಡುತ್ತೇವೆ ಎಂದರು.