Dharwad

ಅಣ್ಣಿಗೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಜನ ಸಂಪರ್ಕ ಸಭೆ…. ಕೆಲವು ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಕಾರ್ಮಿಕ ಸಚಿವರು

Share

ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ್ದು, ಕೆಲವು ಅಹವಾಲುಗಳುಗೆ ಸ್ಥಳದಲ್ಲಿಯೇ ಸಚಿವರು ಪರಿಹಾರ ಒದಗಿಸಿದ್ದಾರೆ.

ಅಣ್ಣಿಗೇರಿಯ ಸುತ್ತಮುತ್ತಲ ಪ್ರದೇಶದ ಸಾರ್ವಜನಿಕರು ಸಾವಿರಾರು ಮಂದಿ ಪಾಲ್ಗೊಂಡು ತಮ್ಮ ಅಹವಾಲಗಳನ್ನು ಸಚಿವರಿಗೆ ಸಲ್ಲಿಸಿದರು. ಸ್ಥಳದಲ್ಲೇ ಕೆಲವು ಸಮಸ್ಯೆಗಳಿಗೆ ಸಚಿವರು ಪರಿಹಾರ ಒದಗಿಸಿದರು. ಇನ್ನುಳಿದ ಕುಂದುಕೊರತೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಶಾಸಕರಾದ ಎನ್‌ ಎಚ್‌ ಕೋನರಡ್ಡಿ, ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಟೀಲ್ ಭುವನೇಶ್ ದೇವಿದಾಸ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎಸ್ ಆರ್ ಪಾಟೀಲ್, ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.

 

Tags:

error: Content is protected !!