Bagalkot

ಇಂದು ಬಾದಾಮಿಗೆ ನಿಖಿಲ್ ಕುಮಾರಸ್ವಾಮಿ…

Share

ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣಕ್ಕೆ ಇಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡುತ್ತಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ನಿಖಿಲ್ ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿದ್ದಾರೆ.

ಬಾದಾಮಿಗೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಅವರು ಮೊದಲಿಗೆ ನಾಡಿನ ಶಕ್ತಿದೇವತೆಗಳಲ್ಲಿ ಒಂದಾದ ಬನಶಂಕರಿ ದೇವಿಯ ದರ್ಶನ ಪಡೆದ ನಂತರ, ಗುಳೇದಗುಡ್ಡದ ಶಿವಯೋಗ ಮಂದಿರದಲ್ಲಿರುವ ಗುರುಸಿದ್ದೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ. ಇದಾದ ಬಳಿಕ ಬಾದಾಮಿ ಪಟ್ಟಣದಲ್ಲಿ ಜನಸಾಗರದೊಂದಿಗೆ ರ್ಯಾೇಲಿ ನಡೆಯಲಿದೆ. ಈ ರ್ಯಾ ಲಿ ಕಬ್ಬಲಗೇರಿ ಕ್ರಾಸ್‌ನಿಂದ ಆರಂಭವಾಗಿ ಕಾಳಿದಾಸ ಶಿಕ್ಷಣ ಸಂಸ್ಥೆಯವರೆಗೆ ಸಾಗಲಿದೆ. ನಂತರ ಬಾದಾಮಿ ಪಟ್ಟಣದ ವೀರಪುಲಿಕೇಶಿ ವಿದ್ಯಾಸಂಸ್ಥೆಯ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಗುವುದು.

Tags:

error: Content is protected !!