Belagavi

ಬೆಳಗಾವಿ ಪಾಲಿಕೆ ಸಿಬ್ಬಂದಿಯಿಂದ 2ನೇ ದಿನಕ್ಕೆ ಮುಂದುವರೆದ ಪ್ರತಿಭಟನೆ

Share

ರಾಜ್ಯ ಸರ್ಕಾರಿ ನೌಕರರಿಗೆ ನೀಡಿರುವ ವಿವಿಧ ಸೌಲಭ್ಯಗಳನ್ನು ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳಿಗೆ ವಿಸ್ತರಿಸುವಂತೆ ಆಗ್ರಹಿಸಿ ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ಮಹಾನಗರ ಪಾಲಿಕೆಯ ನೌಕರರ ಕ್ಷೇಮಾಭೀವೃದ್ಧಿ ಸಂಘದ ಪದಾಧಿಕಾರಿಗಳು ಪಾಲಿಕೆಯ ಸಿಬ್ಬಂದಿಗಳು ಮಂಗಳವಾರ ಆರಂಭಿಸಿರುವ ಪ್ರತಿಭಟನೆ ಎರಡನೇ ದಿನಕ್ಕೆ ಮುಂದುವರೆದಿದೆ

ರಾಜ್ಯದ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿ ಸೂಚನೆಯನ್ನು ಪ್ರಕಟಿಸಬೇಕು. ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆಜಿಐಡಿ, ಜಿಪಿಎಫ್ ಸೌಲಭ್ಯವನ್ನು ಮಹಾನಗರ ಪಾಲಿಕೆಯ ಅಧಿಕಾರಿ, ನೌಕರರಿಗೆ ಜಾರಿ ಮಾಡಬೇಕು ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ ಆರೋಗ್ಯ ಸಂಜೀವಿನಿಯನ್ನು ಪಾಲಿಕೆಯ ಅಧಿಕಾರಿ ಸಿಬ್ಬಂದಿಗಳಿಗೂ ಅನ್ವಯ ಮಾಡಬೇಕು ಹಾಗೂ ಮಹಾನಗರ ಪಾಲಿಕೆಯಲ್ಲಿ ಕೆಲಸ ನಿರ್ವಹಿಸುವ ಹಿರಿಯ ನೌಕರರಿಗೆ ಮುಂಬಡ್ತಿ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬೆಳಗಾವಿ ನೌಕಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ ದ್ಯಾವಣ್ಣವರ ಮಾತನಾಡಿ, ನೌಕರ ಸಂಘಗಳಿಂದ ನಿನ್ನೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳು ಸಹಿತ ಇಲಾಖೆ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಇಂದು ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳ ಸಿಬ್ಬಂದಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿವೆ.ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರಿ ನೌಕರರಿಗೆ ದೊರೆಯುವ ಸೌಲಭ್ಯಗಳು ಅನ್ವಯಿಸುವುದಿಲ್ಲ. ಏಳನೇ ವೇತನ ಆಯೋಗ ಜಾರಿಗೊಳಿಸಿದೆ ಆದರೆ ಸರ್ಕಾರಿ ನೌಕರರಿಗೆ ಮಾತ್ರ ಸರ್ಕಾರ ಅನುದಾನ ನೀಡುತ್ತದೆ.

ಸ್ಥಳೀಯ ಸಂಘ ಸಂಸ್ಥೆಗಳ ನೌಕರರಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಬೇಕು ಬೇಡಿಕೆಗಳನ್ನು ಶೀಘ್ರವೇ ಸರ್ಕಾರ ಈಡೇರಿಸದಿದ್ದರೆ ಹಂತ ಹಂತವಾಗಿ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಿದರು ಪದಾಧಿಕಾರಿಗಳಾದ ಮಾಲಿ ಗುಂಡಪ್ಪನವರ, ಸುರೇಶ ದ್ಯಾವಣ್ಣವರ ಸೇರಿದಂತೆ ಪಾಲಿಕೆಯ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Tags:

error: Content is protected !!