Belagavi

ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

Share

ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು

ಬುಧವಾರ ಬೆಳಗಾವಿಯ ಕಿತ್ತೂರು ಚನ್ನಮ್ಮ ವೃತ್ತದ ಹತ್ತಿರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಷೇನ ನೇತೃತ್ದವಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿನಿಗೆ ನ್ಯಾಯ ದೊರೆಯಬೇಕು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡಲು ಕ್ರಮ ಕೈಗೊಳ್ಳಬೇಕು

ವಿದ್ಯಾರ್ಥಿನಿ ಮೆಲೆ ಅತ್ಯಾಚಾರವೆಸಗಿ ಬ್ಲಾಕ್ ಮೇಲ ಮಾಡಿ ಬೇದರಿಕೆ ಹಾಕಿದ್ದಾರೆ ಇದರಲ್ಲಿ ಇಬ್ಬರೂ ಉಪನ್ಯಾಸಕರು ಮತ್ತೋರ್ವ ಅವರ ಸ್ನೇಹಿತವಾಗಿದ್ದು ಅವರಿಗೆ ಕಠಿಣ ಶಿಕ್ಷೆಯನ್ನು ನೀಡಿ ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ ಎಐಡಿಎಸ್ಓನ ಜಿಲ್ಲಾ ಸಂಚಾಲಕ ಮಹಾಂತೇಶ ಬಿಳೂರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು

Tags:

error: Content is protected !!