BELAGAVI

ಬಸ್ ಬಿಡುವಂತೆ ಆಗ್ರಹಿಸಿ ಸುವರ್ಣಸೌಧದ ಬಳಿ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

Share

ಸಮಯಕ್ಕೆ ಬಾರದ ಬಸ್ ವಿದ್ಯಾರ್ಥಿಗಳೆಲ್ಲ ಠುಸ್ ಮಕ್ಕಳ ದಿನನಿತ್ಯದ ಗೋಳನ್ನು ನೋಡಿದ ಪಾಲಕರ ಮನಸ್ಸು ಕಸ್ ರೋಚ್ಚಿಗೆದ್ದ ವಿದ್ಯಾರ್ಥಿಗಳು ಹಾಗೂ ಪಾಲಕರದಿಂದ ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿಗೆ ಬ್ರೇಕ್ ಈ ಕುರಿತು ಒಂದು ವರದಿ

ಬೆಳಗಾವಿ ತಾಲೂಕಿನ ಕೊಂಡಸಕಪ್ಪ ಗ್ರಾಮಕ್ಕೆ ಬಸ್ ಬಿಡುವಂತೆ ಹಲವಾರು ಬಾರಿ ಮನವಿ ಮಾಡಿದರೂ ಸ್ಪಂದಿಸದ ಕೆಎಸ್ಆರ್ಟಿಸಿ ಅಧಿಕಾರಿಗಳ ವಿರುದ್ಧ ಏಕಾಏಕಿ ಬುಧವಾರ ತಮ್ಮೂರಿಗೆ ಬಸ್ ಬಿಡುವಂತೆ ಒತ್ತಾಯಿಸಿ ಸುವರ್ಣಸೌಧದ ಬಳಿ ಹಾದು ಹೋಗಿರುವ ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವುದನ್ನು ಕಂಡು ಪಾಲಕರು ಸಾಥ ನೀಡಿ ಶಾಲೆ, ಕಾಲೇಜಿಗೆ ಹೋಗಲು ಅನಾನುಕೂಲ ಆಗುತ್ತಿದೆ.

ಬಸ್ ಬಿಡೋವರೆಗೂ ರಸ್ತೆ ಬಂದ್ ಮಾಡುವುದಾಗಿ ವಿದ್ಯಾರ್ಥಿಗಳ ಪೋಷಕರ ಎಚ್ಚರಿಕೆ ನೀಡಿದರು. ಹೆದ್ದಾರಿಯಲ್ಲಿ ಒಂದು ಕಿಮೀ ಗೂ ಅಧಿಕ ಟ್ರಾಫಿಕ್ ಜಾಮ್ ಆಗಿತ್ತು ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಬಸ್ ನ ವ್ಯವಸ್ಥೆ ಮಾಡಿಸುವ ಭರವಸೆ ನೀಡಿ ವಿದ್ಯಾರ್ಥಿಗಳ ಮನವೊಲಿಕೆ ಮಾಡಿ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ಬಸನಲ್ಲಿ ಕಳುಹಿಸಿದರು.

Tags:

error: Content is protected !!