Vijaypura

ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಹೆಚ್ಚಿಸುವುದು ಹಾಗೂ ರಾಷ್ಟ್ರೀಯ ಯೋಜನೆಯೆಂದು ಘೋಷಿಸುವಂತೆ ಅಧಿಸೂಚನೆ ಹೊರಡಿಸಲು ಒತ್ತಾಯಿಸಿ ಪ್ರತಿಭಟನೆ

Share

ಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಜಲಾಶಯದ ನೀರಿನ ಮಟ್ಟ ಹೆಚ್ಚಿಸುವುದು ಹಾಗೂ ರಾಷ್ಟ್ರೀಯ ಯೋಜನೆಯೆಂದು ಘೋಷಿಸುವಂತೆ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ನಿಡಗುಂದಿ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು.

ಸ್ವಾಮೀಜಿಗಳು, ರೈತರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು. ಪ್ರತಿಭಟನಾ ಸಮಾವೇಶಕ್ಕೆ ಚಾಲನೆ ನೀಡಿದ ಮಾಜಿ ಸಚಿವ ಎಸ್‌.ಕೆ.ಬೆಳ್ಳುಬ್ಬಿ, ಕರಿಭಂಟನಾಳದ ಶಿವಕುಮಾರ ಸ್ವಾಮೀಜಿ, ನಿಡಗುಂದಿ ರುದ್ರೇಶ್ವರ ಮಠದ ರುದ್ರಮುನಿ ಸ್ವಾಮೀಜಿ, ಚಿಮ್ಮಲಗಿ ಸಿದ್ಧರೇಣುಕ ಸ್ವಾಮೀಜಿ, ಮಹಾದೇವ ಸ್ವಾಮೀಜಿ, ಹುಣಶ್ಯಾಳದ ಸಂಗನಬಸವ ಸ್ವಾಮೀಜಿ, ಪಡೇಕನೂರದ ಮಲ್ಲಿಕಾರ್ಜುನ ಸ್ವಾಮೀಜಿ, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮತ್ತಿತರರು ಚಾಲನೆ ನೀಡಿದರು. ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಎ.ಡಿ.ಅಮರವಾದಗಿ ಹೋರಾಟಗಾರರಿಂದ ಮನವಿ ಪತ್ರ ಸ್ವೀಕರಿಸಿದರು.

Tags:

error: Content is protected !!