Dharwad

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರೊಟೆಸ್ಟ್…. 

Share

ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಧಾರವಾಡದಲ್ಲಿ ಕಾರ್ಮಿಕರ ಎಂಟು ಸಂಘಟನೆಗಳು ಜಂಟಿಯಾಗಿ ಪ್ರತಿಭಟನಾ ರ್‍ಯಾಲಿ ನಡೆಸಿ‌ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಕಾರ್ಮಿಕ ಸಂಘಟನೆಗಳು ಪ್ರತಿಭಟನಾ ರ್‍ಯಾಲಿ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಲಾಯಿತು. 4 ಕಾರ್ಮಿಕ ಸಂಹಿತೆಯನ್ನು ಕೇಂದ್ರ ಸರ್ಕಾರ ಕೈಬಿಡಬೇಕು, ಜೀವನಕ್ಕೆ ಕನಿಷ್ಠ 26 ಸಾವಿರ ವೇತನ ನಿಗದಿ ಮಾಡಬೇಕು, ಸಾರ್ವಜನಿಕ ಉದ್ದಿಮೆಯಲ್ಲಿ ಖಾಸಗೀಕರಣ ನಿಲ್ಲಿಸಬೇಕು ಎಂಬ ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಕಾರ್ಮಿಕ ಸಂಘಟನೆ ಬೇಡಿಕೆಗಳ ಸರ್ಕಾರಗಳ ಸ್ಪಂದಿಸಬೇಕು ಇಲ್ಲವಾದಲ್ಲಿ ಹೋರಾಟ ಮತ್ತಷ್ಟು ಉಗ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

Tags:

error: Content is protected !!