Vijaypura

ಕೇಸರಿ ಧ್ವಜವನ್ನು ಗುರುವನ್ನಾಗಿ ಸ್ವೀಕರಿಸಿ ಗೌರವ ಸಮರ್ಪಿಸಿದ್ದು ಆರ್.ಎಸ್.ಎಸ್.; ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ

Share

ಕೇಸರಿ ಧ್ವಜವನ್ನು ಗುರುವನ್ನಾಗಿ ಸ್ವೀಕರಿಸಿ ಗೌರವ ಸಮರ್ಪಿಸಿದ್ದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು. ಅವರು ಮಹಾರಾಷ್ಟ್ರ ರಾಜ್ಯದ ಸಾತಾರಾ ಜಿಲ್ಲೆಯ ಮಹಾಬಲೇಶ್ವರ ದ ಕನ್ಹೇರಿ ಮಠದಲ್ಲಿ ವಿಜಯಪುರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಹಾಗೂ ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ಆಯೋಜಿಸಿದ ಗುರುವಂದನೆ ಹಾಗೂ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ

ಮಾತನಾಡಿ 1925 ರಲ್ಲಿ ವಿಜಯದಶಮಿಯಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರಾರಂಭವಾಯಿತು. ಡಾ ಕೆ.ಬಿ. ಹೆಡಗೆವಾರ ಇವರು ಭಾರತದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕರು, ಸ್ವಾತಂತ್ರ್ಯ ಹೋರಾಟಗಾರರು ಮತ್ತು ಶ್ರೇಷ್ಠ ಸಮಾಜ ಸೇವಕರು ಮತ್ತು ಸುಧಾರಕರಾಗಿದ್ದರು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಸಾಬು ಮಾಶ್ಯಾಳ ಕೇಸರಿ ಧ್ವಜಾರೋಹಣ ನೇರವೇರಿಸಿದರು. ಇದೇ ಸಮಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆ ನಡೆಸಲಾಯಿತು. ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮುಖಂಡರಾದ ಮಲ್ಲು ಕಲಾದಗಿ, ಆನಂದ ಬಿಸ್ಟಗೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:

error: Content is protected !!