ಬೆಳಗಾವಿ ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮೂವರು ಮೃತಪಟ್ಟಿದ್ದು, ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರೆದಿದೆ.
ಬೆಳಗಾವಿಯ ಜೋಷಿಮಳಾದಲ್ಲಿ ವಿಷಸೇವಿಸಿ ನಾಲ್ವರು ಆತ್ಮಹತ್ಯೆಗೆ ಯತ್ನಿಸಿ ಮೂವರು ಮೃತಪಟ್ಟು ಓರ್ವ ಮಹಿಳೆಯ ಸ್ಥಿತಿ ಗಂಭೀರವಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸಂತೋಷ ಕುರಡೇಕರ್ ( 44) , ಸುವರ್ಣ ಕುರಡೇಕರ್ , ಮಂಗಳಾ ಕುರಡೇಕರ್ ಆತ್ಮಹತ್ಯೆ ಮಾಡಿಕೊಂಡವರು. ಸುನಂದ ಕುರಡೇಕರ್ ಸ್ಥಿತಿ ಚಿಂತಾಜನಂಕವಾಗಿದೆ. ತಾಯಿ, ಮಗ, ಮಗಳು ಸಾವನ್ನಪ್ಪಿದ್ದು, ಓರ್ವ ಮಗಳ ಸ್ಥಿತಿ ಗಂಭೀರವಾಗಿದೆ.
ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶಹಾಪುರ ಪೊಲೀಸರ್ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.