ಬೆಳಗಾವಿ : ಸರ್ವಲೋಕ ಸೇವಾ ಫೌಂಡೇಶನ್ ಸಂಸ್ಥಾಪಕ, ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಅವರು ಪರಿಸರ ಕಾಳಜಿ ವಹಿಸುತ್ತಿರುವುದು ಅಭಿಮಾನದ ಸಂಗತಿ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷೆ ರತ್ನಪ್ರಭಾ ಬೆಲ್ಲದ ಹೇಳಿದರು.
ಮಂಗಳವಾರ ವೀರಶೈವ ಲಿಂಗಾಯತ ಭವನದಲ್ಲಿ ವೀರೇಶ ಬಸಯ್ಯ ಹಿರೇಮಠ ಅವರ ಕಡೆಯಿಂದ ಬಿಲ್ವ ಪತ್ರೆ ಗಿಡವನ್ನು ಸ್ವೀಕರಿಸಿ ಮಾತನಾಡಿದರು.ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಸಾಗರಗಳು ಇತ್ಯಾದಿಗಳು ಎಂದೆಂದಿಗೂ ಉಳಿಯುವುದು ಬಹಳ ಮುಖ್ಯ ಅದನ್ನು ಸರ್ವಲೋಕಾ ಫೌಂಡೇಶನ್ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಹಿರೇಮಠ ಅವರ ಪರಿಸರಪ್ರೇಮ ಹಾಗೂ ಸಾಮಾಜಿಕ ಕಾಳಜಿಯನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ವೀರಶೈವ ಮಹಾಸಭಾ ಪದಾಧಿಕಾರಿಗಳು ಇತರರು ಉಪಸ್ಥಿತರಿದ್ದರು