Uncategorized

ಒಂದೇ ತಿಂಗಳಿನಲ್ಲಿ ಮೂರು ಬಾರಿ ಜಲಾವೃತಗೊಂಡ ಯಡೂರ- ಕಲ್ಲೋಳ ಸೇತುವೆ ,ಪ್ರವಾಹದ ಭೀತಿ

Share

ಚಿಕ್ಕೋಡಿ:ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಭಾರಿ ಪ್ರಮಾಣದ ಮಳೆ ಆಗುತ್ತಿರುವುದರಿಂದ ಅದಲ್ಲದೆ ಅಲ್ಲಿನ ಜಲಾಶಯಗಳಿಂದ ನೀರು ಬಿಡುಗಡೆ ಮಾಡುತ್ತಿರುವುದರಿಂದ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕಿನ ನದಿಗಳಿಗೆ ನೀರಿನ ಪ್ರಮಾಣ ಹೆಚ್ಚಾಗಿದೆ. ಹಾಗೂ ಕಲ್ಲೋಳ-ಯಡೂರ ಸೇತುವೆಯು ಒಂದೇ ತಿಂಗಳಿನಲ್ಲಿ ಮೂರು ಬಾರಿ ಜಲಾವೃತ್ತಗೊಂಡಿದೆ.

ಕಳೆದ ನಾಲ್ಕೈದು ದಿನಗಳಿಂದ ಮಳೆಯ ಪ್ರಮಾಣದ ತಗ್ಗಿದ ಹಿನ್ನೆಲೆಯಲ್ಲಿ ನದಿಗಳಿಗೆ ನೀರಿನ ಪ್ರಮಾಣ ಕಡಿಮೆಯಾಗಿ ಚಿಕ್ಕೋಡಿ ನಿಪ್ಪಾಣಿ ತಾಲೂಕಿನ ಕೆಳಹಂತದ ಸೇತುವೆಗಳು ಸಂಚಾರಕ್ಕೆ ಮುಕ್ತಗೊಂಡಿದ್ದವು. ಆದರೆ ನಿನ್ನೆಯಿಂದ ಮಹಾರಾಷ್ಟ್ರದ ಜಲಾಯನ ಪ್ರದೇಶಗಳಲ್ಲಿ ಹಾಗೂ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕಿನಲ್ಲಿ ಮಳೆಯ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಕೃಷ್ಣಾ, ವೇದಗಂಗಾ,ದೂಧಗಂಗಾ ನದಿಗಳಿಗೆ ಒಂದೇ ದಿನದಲ್ಲಿ ನಾಲ್ಕರಿಂದ -ಐದು ಅಡಿಯಷ್ಟು ನೀರು ಏರಿಕೆಯಾಗಿದೆ.

ಚಿಕ್ಕೋಡಿ ತಾಲೂಕಿನ ಕಲ್ಲೋಳ- ಯಡೂರ,ಮಾಂಜರಿ-ಬಾವನ ಸೌಂದತ್ತಿ ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ.
ಅದಲ್ಲದೆ ನಿಪ್ಪಾಣಿ ತಾಲೂಕಿನ ಕೆಳಹಂತದ ಸೇತುವೆಗಳು ಜಲಾವೃತಗೊಂಡಿದೆ. ಕ್ಷಣ ಕ್ಷಣಕ್ಕೂ ಭಾರಿ ಪ್ರಮಾಣದಲ್ಲಿ ನೀರು ಏರಿಕೆಯಾಗುತ್ತಿರುವುದರಿಂದ ನದಿ ತೀರದಲ್ಲಿ ಪ್ರವಾಹದ ಭೀತಿ ಎದುರಾಗಿದೆ.

Tags:

error: Content is protected !!