Vijaypura

ನಿಂಬೆನಾಡಿನ ಕನಸುಗಳನ್ನು ಸಾಕಾರಗೊಳಿಸಿದ ಜನಮಾನಸ ಮಾಸ್ ಲೀಡರ್ ಯಶವಂತರಾಯಗೌಡ ಪಾಟೀಲ

Share

ಜನಪ್ರತಿನಿಧಿಗಳು ತಮಗೆ ಸಿಕ್ಕಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳ ಮೂಲಕ ಜನಮಾನಸದಲ್ಲಿ ಉಳಿಯುವದು ಕಡಿಮೆಯೇ. ಆದರೆ ಇಲ್ಲೊಬ್ನ ಶಾಸಕರು ಹಂತ ಹಂತವಾಗಿ ಮತ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧನೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಚುರುಕುತನ, ನಾಯಕತ್ವ ಗುಣ ಮತ್ತು ಪ್ರತಿಭೆ ಮೂಲಕ ತಮ್ಮ ಮತಕ್ಷೇತ್ರದಲ್ಲಿ 4257 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕೊಡಿಸುವ ಮೂಲಕ ತಮ್ಮ ಮತಕ್ಷೇತ್ರದ ಅಭಿವೃದ್ಧಿ ನಕ್ಷೆಯನ್ನೆ ಬದಲಿಸಲು ಹೊರಟಿದ್ದಾರೆ. ಅಂದ ಹಾಗೆ ಆ ಶಾಸಕರು ಯಾರು? ರೈತರ, ವಿದ್ಯಾರ್ಥಿಗಳ, ಸಾಮಾನ್ಯ ಜನತೆಗೆ ಅನುಕೂಕವಾಗುವ ಅಭಿವೃದ್ಧಿ ಯೋಜನೆ ಹಾಗೂ ಕಾಮಗಾರಿಗಳಾದರೂ ಯಾವವು ಅನ್ನೋ ಕುರಿತು ಇಲ್ಲಿದೆ ಒಂದು ವಿಶೇಷ ವರದಿ…

ವಿಜಯಪುರ ಜಿಲ್ಲೆ ಎಂದಾಕ್ಷಣ ಬರಗಾಲ ಪೀಡಿತ ಜಿಲ್ಲೆಯಾದರೂ ಸಹ ತೋಟಗಾರಿಕೆ ಬೆಳೆಗಳ ಮೂಲಕ ಖ್ಯಾತಿ ಪಡೆದಿದೆ. ಜಿಲ್ಲೆಯು 13 ತಾಲ್ಲೂಕುಗಳನ್ನು ಹೊಂದಿ 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಕ್ಷೇತ್ರ. ಇಂಡಿ ವಿಧಾನಸಭಾ ಕ್ಷೇತ್ರವು ನಿಂಬೆ ಹಣ್ಣು ಬೆಳೆಯುವ ಮೂಲಕ ನಿಂಬೆನಾಡು ಎನಿಸಿಕೊಂಡಿದೆ. ಈ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಜಯ ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷದ ಯಶವಂತರಾಯಗೌಡ ಪಾಟೀಲ ಜನಮಾನಸದ ಮಾಸ್ ಲೀಡರ್. ಶಾಸಕ ಯಶವಂತರಾಯಗೌಡ ಪಾಟೀಲರು ಕಳೆದ 40 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮರಗೂರಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 2018ರಲ್ಲಿ ಪೂರ್ಣಗೊಳಿಸಿದ್ದು ಇವರ ಹೆಗ್ಗಳಿಕೆಗೆ ಪಾತ್ರವಾದ ಸಾಧನೆಯಾಗಿದೆ.

ಮೊದಲ ಎಲೆಕ್ಷನ್ ಗೆದ್ದಾಗಿನಿಂದ ಕ್ಷೇತ್ರದ ಜನತೆಯ ಕಷ್ಟ ಸುಖಕ್ಕೆ ಸ್ಪಂದಿಸಿ ಜನರ ಪ್ರೀತಿಯನ್ನ ಗಿಟ್ಟಿಸಿದ್ದಾರೆ. ಕ್ಷೇತ್ರದ ಪ್ರತಿ ಮನೆ ಮನೆಯಲ್ಲೂ ಯಶವಂತರಾಯಗೌಡ ಅವರ ದೂರದೃಷ್ಟಿ ಹಾಗೂ ಜನಪರ ಆಡಳಿತ ಮೆಚ್ಚುಗೆಗಳಿಸಿದೆ. ಇಷ್ಟೆ ಅಲ್ಲದೆ ಇದೀಗ ಮತ್ತೆ ಇಂಡಿ ವಿಧಾನ ಸಭೆ ಕ್ಷೇತ್ರದಲ್ಲಿ ಪ್ರಗತಿ ಪರ್ವ ಆರಂಭಗೊಂಡಿದ್ದು, ಜು.14 ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಆಗಮಿಸಿ 4257 ಕೋಟಿ ರೂ.ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಲೋಕಾರ್ಪಣೆ ನೆರವೇರಿಸಲಿದ್ದಾರೆ. ಇನ್ನೂ ಈ ಸಮಾರಂಭದಲ್ಲಿ ಸಚಿವರು ಹಾಗೂ ಶಾಸಕದ್ವಯರು ಭಾಗವಹಿಸಿದ್ದಾರೆ.

ಇನ್ನೂ ಜನಸಾಮಾನ್ಯರು, ರೈತರು, ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಅನುಕೂಲ, ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಹಲವು ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ. ಆ ಕಾಮಗಾರಿಗಳ ವಿವರ ನೊಡೊದಾದ್ರೆ ಇಂಡಿ ಮತ್ತು ಚಡಚಣ ತಾಲೂಕಿನ 19 ಕೆರೆ ತುಂಬುವ ಯೋಜನೆ, ಜಲಜೀವನ್ ಮಿಷನ್ ಕಾಮಗಾರಿಗಳು, ಇಂಡಿ ನಗರದಲ್ಲಿ ನೂತನ ಶ್ರೀ ಸಿದ್ದೇಶ್ವರ ಬೃಹತ್ ವಾಣಿಜ್ಯ ಸಂಕೀರ್ಣ ಮಾರುಕಟ್ಟೆ, ಇಂಡಿ ನಗರದ ಡಾ.ಬಿ.ಆ‌ರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಪ್ರಗತಿ ಕಾಲನಿಯ ಸಿಸಿ ರಸ್ತೆ, ಹೊರ್ತಿ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿಗಳಿಗೆ ಹೆಚ್ಚುವರಿ ಕೊಠಡಿಗಳು ಹಾಗೂ ಮೂಲ ಸೌಕರ್ಯ,

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆ, ಇಂಡಿ, ಮಿರಗಿ ಗ್ರಾಮದ ಹಳ್ಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್, ಇಂಡಿ ನಗರದ ಹೀರೇ ಇಂಡಿ ಹನುಮಾನ ಗುಡಿಯಿಂದ ಜಲದಪ್ಪನ ಕೆರೆವರೆಗೆ ಹಳ್ಳದ ಅಭಿವೃದ್ಧಿ, ಆಳೂರ ಗ್ರಾಮದಲ್ಲಿ ಸರ್ವೆ ನಂ. 128 ರಲ್ಲಿ ಬಾಂದಾರ, ನಿಂಬಾಳ ಗ್ರಾಮದ ಸಣ್ಣ ನೀರಾವರಿ ಕೆರೆ ಅಭಿವೃದ್ಧಿ, ಹಿರೇಬೇವನೂರ ಗ್ರಾಮದ ಇಂಗು ಕೆರೆ ಅಭಿವೃದ್ಧಿ, ಹಡಲಸಂಗ ಗ್ರಾಮದ ಸಣ್ಣ ನೀರಾವರಿ ಕೆರೆ ಅಭಿವೃದ್ಧಿ, ಝಳಕಿ ಹಾಗೂ ಇಂಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರೌಢ ಶಾಲೆ ಕಟ್ಟಡ ಸಾತಲಗಾಂವ ಪಿಐ, ಇಂಡಿ ತಾಲೂಕಿನ 4 ಅಂಗನವಾಡಿ ಕಟ್ಟಡಗಳು, ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವೈದ್ಯಾಧಿಕಾರಿಗಳ ಮತ್ತು ಸಿಬ್ಬಂದಿ ವಸತಿ ಗೃಹ ಹಾಗೂ ಝಳಕಿ ಡಿಪ್ಲೊಮಾ ಕಾಲೇಜಿನ ಹೆಚ್ಚುವರಿ ಕೊಠಡಿಗಳ ಕಾಮಗಾರಿಗಳನ್ನು ಲೋಕಾರ್ಪಣೆಗೊಳ್ಳಲಿವೆ.

ಇನ್ನೂ ಹೊರ್ತಿಯ ಶ್ರೀ ರೇವಣಸಿದ್ದೇಶ್ವರ ಏತ ನಿರಾವರಿ ಯೋಜನೆ ಕಾಮಗಾರಿಗಳು, ತಿಡಗುಂದಿ ಶಾಖಾ ಕಾಲುವೆಯ ವಿಸ್ತರಣೆ ಕಿಮೀ 56.00 ರಿಂದ 65.58 ವರೆಗಿನ ವಿತರಣಾ ಜಾಲ ನಿರ್ಮಾಣದ ಕಾಮಗಾರಿ, ಚಡಚಣ-ಗಾಣಗಾಪೂರ (115 ಕಿ.ಮೀ.) ರಸ್ತೆ ಅಭಿವೃದ್ಧಿ (ಇಂಡಿ ಮತಕ್ಷೇತ್ರದ 48 ಕಿ.ಮೀ.), (ಪಡನೂರ-ಅಂಕಲಗಿ) ಭೀಮಾ ನದಿಗೆ ಸೇತುವೆ ಕಾಮಗಾರಿ, ಇಂಡಿ ರೈಲು ನಿಲ್ಯಾಣದಿಂದ ಹಲಸಂಗಿ ರಾಷ್ಟ್ರೀಯ ಹೆದ್ದಾರಿವರೆಗೆ ರಸ್ತೆ ಸುಧಾರಣೆ ಕಾಮಗಾರಿ (ಎನ್‌ಎಚ್-52), ಔರಾದ್-ಸದಾಶಿವಗಡ ರಾಜ್ಯ ಹೆದ್ದಾರಿ 34ರ ರಸ್ತೆ ಸುಧಾರಣೆ ಕಾಮಗಾರಿ, ಇಂಡಿ ಪಟ್ಟಣದಲ್ಲಿ ಜಿಟಿಟಿಸಿ ಕಾಲೇಜು ನಿರ್ಮಾಣ ಕಾಮಗಾರಿ, ಪ್ರಗತಿ ಪಥ ಯೋಜನೆಯಡಿ ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ನೆರವೆರಲಿದೆ.ಈ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಜನಪ್ರತಿನಿಧಿಗಳು ಸಾಥ್ ನೀಡಲಿದ್ದಾರೆ.

ಒಟ್ನಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಇವರ ದೂರದೃಷ್ಟಿ ಯೋಜನೆಗಳ ಪರಿಣಾಮ ಅಭಿವೃದ್ಧಿ ಪರ್ವ ಪ್ರಾರಂಭವಾಗುತ್ತಿದೆ. ಇಂಡಿ ಮತಕ್ಷೇತ್ರದಲ್ಲಿ ಯಶವಂತರಾಯಗೌಡ ಪಾಟೀಲ ಜನಮಾನಸದ ಮಾಸ್ ಲೀಡರ್ ಆಗಿ ಮತಕ್ಷೇತ್ರದ ಅಭಿವೃದ್ಧಿ ನಕ್ಷೆ ಬದಲಿಸಲು ಮುನ್ನುಡಿ ಬರೆದಿದ್ದು ಜನ ಮೆಚ್ಚುಗೆಗೆ ಪಾತ್ರವಾಗಿದೆ.

ವಿಜಯಕುಮಾರ ಸಾರವಾಡ
ಇನ್ ನ್ಯೂಜ್
ವಿಜಯಪುರ..

Tags:

error: Content is protected !!