ಪಶ್ಚಿಮ ಘಟ್ಟ ಹಾಗೂ ಬೆಳಗಾವಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಘಟಪ್ರಭಾ ನದಿಗೆ 65,000 ಕ್ಯೂಸೆಕ್ ನೀರು ಬರುತ್ತಿದೆ. ಇದರಿಂದ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮಾಚಕನೂರು ಗ್ರಾಮದ ಹೊಳೆ ಬಸವೇಶ್ವರ ದೇವಾಲಯವು ಜಲಾವೃತವಾಗಿದೆ.
ದೇವಾಲಯದಲ್ಲಿ ಸುಮಾರು ಮೂರು ಅಡಿಗಳಷ್ಟು ನೀರು ನಿಂತಿದ್ದು, ಶಿವಲಿಂಗ ಹಾಗೂ ನಂದಿ ವಿಗ್ರಹಗಳು ಸಂಪೂರ್ಣವಾಗಿ ಮುಳುಗಿವೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ, ಮುಧೋಳ ತಾಲ್ಲೂಕಿನ ಘಟಪ್ರಭಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ತಾಲ್ಲೂಕಿನಲ್ಲಿರುವ 12 ಸೇತುವೆಗಳು ಮುಳುಗಡೆಯಾಗಿವೆ.

