BELAGAVI

ಬೆಳಗಾವಿಯಲ್ಲಿ ಕ್ಯಾಂಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು….

Share

ಕ್ಯಾಂಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಬಂಧಿಸಿದ್ದು ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟ ಘಟನೆ ಬಸವೇಶ್ವರ ವೃತ್ತದ ಬಳಿ ಗುರುವಾರ ನಡೆದಿದೆ.

ಬೆಳಗಾವಿಯ ಶಾಸ್ತ್ರೀ ನಗರದ ಸುನೀಲ್ ದೇಸಾಯಿ (47) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಆರ್ಪಿಡಿ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಟ್ರಕ್ ಸುನಿಲ್ ದೇಸಾಯಿ ಅವರ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಸುನೀಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದಕ್ಷಿಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:

error: Content is protected !!