ಉತ್ತರ ಕರ್ನಾಟಕ ಜೀವನಾಡಿಯಾಗಿರುವ
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಇಂದು ಬಾಗಿನ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭರದ ಸಿದ್ಧತೆಗಳು ಪೂರ್ಣಗೊಂಡಿವೆ. ಇಂದು ಮಧ್ಯಾಹ್ನ 12.30 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರು ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಕೃಷ್ಣಾ ನದಿಗೆ ಗಂಗಾ ಪೂಜೆ ನೆರವೇರಿಸಲಾಗುವುದು. ಮುಖ್ಯಮಂತ್ರಿಗಳು ಬೆಂಗಳೂರಿನಿಂದ ವಿಮಾನದ ಮೂಲಕ ಕೊಪ್ಪಳದ ಗಿಣಿಗೇರಾಕ್ಕೆ ಆಗಮಿಸಿ, ನಂತರ ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ತಲುಪಲಿದ್ದಾರೆ. 123.081 ಟಿಎಂಸಿ ಸಾಮರ್ಥ್ಯದ ಜಲಾಶಯವು ಸಂಪೂರ್ಣವಾಗಿ ಭರ್ತಿಯಾಗಿದ್ದು, ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.
