Vijaypura

ವಿಜಯಪುರ ಜಿಲ್ಲೆಗೆ ಸಿಎಂ ಆಗಮನ; ಜಿಲ್ಲೆಯ ಜ್ವಲಂತ ಸಮಸ್ಯೆಗೆ ನೀಡುವವರೇ ಪರಿಹಾರ?

Share

ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಳೆ ಬಾಗಿನ ಅರ್ಪಿಸಲಿದ್ದಾರೆ. ಈ ಮಧ್ಯೆ, ಹಲವಾರು ಸಂಘಟನೆಗಳು ವಿವಿಧ ವಿಷಯಗಳ ಕುರಿತು ಮನವಿ ಸಲ್ಲಿಸಲು ಸಿಎಂ ಅವರನ್ನು ಭೇಟಿ ಮಾಡಲು ಸಿದ್ಧತೆ ನಡೆಸುತ್ತಿವೆ.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯದ ಒಳಹರಿವು ಸ್ಥಿರವಾಗಿ ಮುಂದುವರೆದಿದೆ. ಇದರಿಂದಾಗಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. ಗುರುವಾರ ಜಲಾಶಯ ತನ್ನ ಪೂರ್ಣ ಸಂಗ್ರಹ ಸಾಮರ್ಥ್ಯವಾದ 519.60 ಮೀಟರ್ ಅನ್ನು ತಲುಪಿದ್ದು, ಅಣೆಕಟ್ಟಿನಲ್ಲಿ 123.081 ಟಿಎಂಸಿಎಫ್‌ಟಿ ನೀರು ಸಂಗ್ರಹವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಲಾಶಯದ ಒಳಹರಿವು 59,312 ಕ್ಯೂಸೆಕ್‌ಗಳಾಗಿದ್ದು, ನಾಲ್ಕು ಕ್ರಸ್ಟ್ ಗೇಟ್‌ಗಳು ಮತ್ತು ಕೆಪಿಸಿಎಲ್ ಚಾನಲ್‌ಗಳ ಮೂಲಕ 50,000 ಕ್ಯೂಸೆಕ್‌ಗಳನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೆಲಿಕಾಪ್ಟರ್ ಮೂಲಕ ಆಲಮಟ್ಟಿ ತಲುಪಲಿದ್ದು, ನಂತರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ವಿವಿಧ ವಿಷಯಗಳ ಕುರಿತು ಮನವಿ ಸಲ್ಲಿಸಲು ಸಿಎಂ ಅವರನ್ನು ಭೇಟಿ ಮಾಡಲು ಸಿದ್ಧತೆ ನಡೆಸುತ್ತಿವೆ. ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಪರಿಹರಿಸಲು ಮನವಿ ಮಾಡಲಿದ್ದಾರೆ

ಇನ್ನೂ ಈ ಮಧ್ಯೆ, ಹಲವಾರು ಸಂಘಟನೆಗಳು ವಿವಿಧ ವಿಷಯಗಳ ಕುರಿತು ಮನವಿ ಸಲ್ಲಿಸಲು ಸಿಎಂ ಅವರನ್ನು ಭೇಟಿ ಮಾಡಲು ಸಿದ್ಧತೆ ನಡೆಸುತ್ತಿವೆ. ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್‌ಗೆ ಹೆಚ್ಚಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು ರೈತ ಸಂಘಟನೆಗಳು ಸಿಎಂ ಅವರನ್ನು ಭೇಟಿ ಮಾಡಲು ಯೋಜಿಸುತ್ತಿದ್ದರೆ, ಪಿಪಿಪಿ ಮಾದರಿಯಲ್ಲಿ ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಪ್ರಸ್ತಾವನೆಯನ್ನು ಕೈಬಿಡುವಂತೆ ಒತ್ತಾಯಿಸಲು ವಿದ್ಯಾರ್ಥಿಗಳು ಮತ್ತು ಇತರ ಸಂಘಟನೆಗಳು ಸಿಎಂ ಅವರನ್ನು ಭೇಟಿ ಮಾಡಲು ಸಿದ್ಧತೆ ನಡೆಸುತ್ತಿವೆ. ಪ್ರಸ್ತಾವನೆಯನ್ನು ವಿರೋಧಿಸಿ ಪ್ರತಿಭಟನೆ ಈಗಾಗಲೇ ತೀವ್ರಗೊಂಡಿದ್ದು, ಹಲವಾರು ಸಂಘಟನೆಗಳು ಸರ್ಕಾರವನ್ನು ಟೀಕಿಸುತ್ತಿವೆ. ಪ್ರಸ್ತಾವನೆಯನ್ನು ಕೈಬಿಡುವಂತೆ ಮಾತ್ರವಲ್ಲದೆ ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜನ್ನು ಸ್ಥಾಪಿಸುವಂತೆ ಒತ್ತಾಯಿಸುತ್ತಿವೆ.ಒಟ್ನಲ್ಲಿ ಜಿಲ್ಲೆಯ ಸಮಸ್ಯೆಗಳನ್ನು ಪರಿಹರಿಸಲು ಸಿಎಂ ಸಿದ್ದರಾಮಯ್ಯ ನವರಿಗೆ ಮನವಿಗಳ ಮಹಾಪೂರವೇ ಹರಿದು ಬರಲಿದೆ. ಸಿಎಂ ಸಿದ್ದರಾಮಯ್ಯ ಅದ್ಯವ ರೀತಿ ಸ್ಪಂದಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

Tags:

error: Content is protected !!