Gokak

ಸಿದ್ದಲಿಂಗ ದಳವಾಯಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Share

ಕುರುಬ ಸಮಾಜದ ಹಿರಿಯ ಮುಖಂಡರು, ಗೋಕಾಕ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಗೋಕಾಕ ನಗರಸಭೆಯ ಮಾಜಿ ಅಧ್ಯಕ್ಷರಾಗಿದ್ದ ಸಿದ್ದಲಿಂಗ ದಳವಾಯಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪಡೆದರು.
ಗುರುವಾರ ನಿಧನರಾದ ದಳವಾಯಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿವರು, ಅವರ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ದಳವಾಯಿ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಸಚಿವೆ ಹೆಬ್ಬಾಳಕರ್, ಅವರಿಗೆ ಸಾಂತ್ವನ ಹೇಳಿದರು. ಸಿದ್ದಲಿಂಗ ದಳವಾಯಿ ಅವರ ನಿಧನದಿಂದ ಕುರುಬ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಅವರು ಸಂತಾಪ ಸೂಚಿಸಿದರು.
ದಳವಾಯಿ ಅವರು ಗೋಕಾಕ ನಗರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ನಾಯಕತ್ವ ಮತ್ತು ಸಮಾಜಸೇವೆ ಅಪ್ರತಿಮವಾದುದು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವೆ ಹೆಬ್ಬಾಳಕರ್ ಪ್ರಾರ್ಥಿಸಿದರು. ಈ ವೇಳೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags:

error: Content is protected !!