Athani

ಟ್ರ್ಯಾಕ್ಟರ್ ಪಲ್ಟಿ ; ಅಥಣಿಯ ಇಬ್ಬರು ಯುವಕರು ಸ್ಥಳದಲ್ಲೇ ಸಾವು

Share

ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ಮುಚ್ಚಂಡಿ ಸಮೀಪ ನಡೆದಿದೆ.

ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಅಭಿಷೇಕ್ ಆರವೇಕರ್ (22) ಸಲ್ಮಾನ್ ಮುಕ್ಕೇರಿ (18) ಮೃತಪಟ್ಟ ದುರ್ದೈವಿಗಳು. ಇನ್ನುಳಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟ್ರ್ಯಾಕ್ಟರ್ ಜಗ್ಗಾಟ ಸ್ಪರ್ಧೆಗೆ ಹೋಗುವ ವೇಳೆ ಅವಘಡ ಸಂಭವಿಸಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿದೆ.

Tags:

error: Content is protected !!