ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಬಂದಿದ್ದ ಗಣತಿದಾರರೊಂದಿಗೆ ೪೫ ನಿಮಿಷಗಳಿಗೂ ಹೆಚ್ಚು ಕಾಲ ಸಮಾಧಾನದಿಂದ ಮಾತುಕತೆ ನಡೆಸಿ ವಿವರ ನೀಡಿದರು. ಗಣತಿದಾರರು ಕೇಳಿದ ಎಲ್ಲ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ತಾಳ್ಮೆಯಿಂದ ಉತ್ತರಿಸಿ, ಸಮೀಕ್ಷೆಗೆ ಅಗತ್ಯವಿರುವ ಸಂಪೂರ್ಣ ಮಾಹಿತಿಯನ್ನು ಒದಗಿಸಿದರು

