


ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ೫೦ ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ, ಬಾಗಲಕೋಟೆಯಲ್ಲಿ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ದೊರೆತಿದೆ.
ತೋಟಗಾರಿಕಾ ವಿಶ್ವವಿದ್ಯಾಲಯದ ಪಕ್ಕದ ಸೆಕ್ಟರ್ ನಂಬರ್ ೧೧೦ ಮತ್ತು ೧೧೨ ರಲ್ಲಿ ಬೃಹತ್ ವೇದಿಕೆಯಲ್ಲಿ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶ್ರೀ ನರೇಂದ್ರ ಪಿ. ಎಂ. ನರೇಂದ್ರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶವಿದೆ.
ಸುವರ್ಣ ಮಹೋತ್ಸವದ ಪ್ರಯುಕ್ತ ನಡೆದ ಈ ಕಾರ್ಯಕ್ರಮಕ್ಕೆ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಪೌರಕಾರ್ಮಿಕರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವು ಆರಂಭವಾಗುವುದಕ್ಕೆ ಮುನ್ನವೇ, ಸ್ಥಳೀಯ ಕಲಾತಂಡಗಳು ಪ್ರದರ್ಶಿಸಿದ ಡೊಳ್ಳು ಕುಣಿತವು ನೆರೆದಿದ್ದ ಜನರ ಗಮನ ಸೆಳೆದು ಸಂಭ್ರಮದ ವಾತಾವರಣವನ್ನು ಸೃಷ್ಟಿಸಿತು.
ಈ ಸಂದರ್ಭದಲ್ಲಿ ಮಂಡಳಿಯ ಕಳೆದ ಐದು ದಶಕಗಳ ಸಾಧನೆ ಮತ್ತು ಮುಂದಿನ ಪರಿಸರ ಸಂರಕ್ಷಣಾ ಯೋಜನೆಗಳ ಕುರಿತು ಪ್ರಮುಖ ಘೋಷಣೆಗಳು ಹೊರಬೀಳುವ ನಿರೀಕ್ಷೆಯಿದೆ.

 
			 
 
 
  
					 
				 
						  
						  
						  
						  
						 
						 
						