ಬೆಳಗಾವಿಯಲ್ಲಿ ಬಹುತೇಕ ಡಿಸೆಂಬರ್ ತಿಂಗಳಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ದಿನಾಂಕ ನಿಗದಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ನೀಡುವ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ
ಶನಿವಾರ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಬಹುತೇಕ ಡಿಸೆಂಬರ್ ತಿಂಗಳಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ದಿನಾಂಕ ನಿಗದಿ ಮಾಡಲಾಗುವುದು. ಇನ್ನು ಇದೇ ವೇಳೆ ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ನೀಡುವ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದರು.
ಮುಂದಿನ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ. ಅವರು ಹೇಳಿದ್ದು ಸೈದ್ಧಾಂತಿಕವಾಗಿ ಮಾತ್ರ. ಲೀಡರ್ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಅಹಿಂದ ಸಂಘಟನೆ ನಾನು ಮಾಡುತ್ತಿದ್ದೆ. ಈಗ ಅದನ್ನು ಸತೀಶ್ ಜಾರಕಿಹೊಳಿ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ. ನಾನು ಮತ್ತು ಯತೀಂದ್ರ ನಾಯಕನನ್ನು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ಎರಡೂವರೆ ವರ್ಷ ಆದ ಮೇಲೆ ಮಾಡುವಂತೆ ಹೈಕಮಾಂಡ್ ಹೇಳಿತ್ತು. ಹಾಗಾಗಿ, ಹೈಕಮಾಂಡ್ ಹೇಳಿದರೆ ಸಂಪುಟ ವಿಸ್ತರಣೆ ಮಾಡುತ್ತೇನೆ. ನಾಲ್ಕು ತಿಂಗಳ ಹಿಂದೆ ಹೈಕಮಾಂಡ್ ಸಂಪುಟ ಪುನರ್ ರಚನೆ ಮಾಡುವಂತೆ ಹೇಳಿತ್ತು. ಆಗ ಸರ್ಕಾರಕ್ಕೆ ಎರಡೂವರೆ ವರ್ಷ ಆದ ಮೇಲೆ ಮಾಡೋಣ ಅಂತಾ ನಾನು ತಿಳಿಸಿದ್ದೆ. ಹಾಗಾಗಿ, ಎರಡೂವರೆ ವರ್ಷ ಆಗಲಿ. ಆಗ ಹೈಕಮಾಂಡ್ ಜೊತೆಗೆ ಮಾತನಾಡುತ್ತೇನೆ ಎಂದರು.
ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಒತ್ತಾಯಿಸಿದ್ದರು. ಹಾಗಾಗಿ, ಎರಡನೇ ಬಾರಿ ಕಿತ್ತೂರು ಉತ್ಸವಕ್ಕೆ ಬಂದಿದ್ದೇನೆ. ವೀರಜ್ಯೋತಿ ಯಾತ್ರೆಗೆ ನಾನೇ ಚಾಲನೆ ನೀಡಿದ್ದೆ. ಇದಾದ ಮೇಲೆ ಇಂದು ಉತ್ಸವದ ಸಮಾರೋಪ ಸಮಾರಂಭಕ್ಕೆ ಬಂದಿದ್ದೇನೆ. ಮುಂದಿನ ವರ್ಷ ನಡೆಯುವ ಉತ್ಸವಕ್ಕೆ ನಾನು ಮೂರನೇ ಬಾರಿಯೂ ಬರುವ ಪ್ರಯತ್ನ ಮಾಡುತ್ತೇನೆ. ಕಾರ್ಯಕ್ರಮ ಯಾವ ರೀತಿ ಮಾಡುತ್ತಾರೆ ಅನ್ನೋದನ್ನು ನೋಡಿಕೊಂಡು ಮುಂದಿನ ಬಾರಿ ಹೆಚ್ಚಿನ ಅನುದಾನ ಉತ್ಸವಕ್ಕೆ ಕೊಡುವ ಬಗ್ಗೆ ವಿಚಾರ ಮಾಡುತ್ತೇನೆ ಎಂದರು.

