Vijaypura

ಬಿಜೆಪಿ ಮುಖಂಡ ವಿಜುಗೌಡರ ಪುತ್ರನಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ; ರಾಜಕೀಯ ಎಂಟ್ರಿಯಿಂದ ದೊಡ್ಡದಾಯಿತಾ ಪ್ರಕರಣ

Share

ವಿಜಯಪುರ ಜಿಲ್ಲೆಯ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್​ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ನಿನ್ನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್‌ನಲ್ಲಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲಾ. ಆದ್ರೆ ದೂರು ದಾಖಲಿಸಲು ಕೆಲವರು ಒತ್ತಡ ತರುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಆರೋಪಿಸಿದ್ದಾರೆ. ಅಲ್ಲದೇ ಮಗನ ತಪ್ಪಿದ್ದರೆ ಕ್ಷಮೆ ಕೇಳುವದಾಗಿಯೂ ಹೇಳಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್…

ವಿಜಯಪುರ ಜಿಲ್ಲೆಯ ಬಿಜೆಪಿ ಮುಖಂಡ ವಿಜುಗೌಡರ ಪುತ್ರ ಸಮರ್ಥ ಗೌಡ ನಿನ್ನೆ ಸಾಯಂಕಾಲ ವಿಜಯಪುರದಿಂದ ಬ್ಲ್ಯಾಕ್‌ ಕಲರ್‌ ಥಾರ್‌ನಲ್ಲಿ ಸಿಂದಗಿ ಕಡೆ ಹೊರಟ್ಟಿದ್ದರು. ಈ ವೇಳೆ ಟೋಲ್ ಸಿಬ್ಬಂದಿ ಸಂಗಪ್ಪ ಹಣ ಕೇಳಿದ್ದಕ್ಕೆ ವಿಜು ಗೌಡ ಪುತ್ರ ಎಂದಿದ್ದಾರೆ. ಯಾವ ವಿಜುಗೌಡ ಅಂತಾ ಸಂಗಪ್ಪ ಕೇಳಿದ್ದಕ್ಕೆ ಥಳಿಸಿರುವ ಆರೋಪ ಮಾಡಲಾಗಿದೆ. ಇನ್ನೂ ಘಟನೆ ಬಳಿಕವೂ ಹಲ್ಲೆಗೊಳಗಾದ ಟೋಲ್ ಸಿಬ್ಬಂದಿ ಸಂಗಪ್ಪ ದೂರು ನೀಡಿಲ್ಲಾ. ದೂರು ನೀಡದ ಕಾರಣ ಈ ವರೆಗೆ ಯಾವುದೇ ದೂರು ದಾಖಲಾಗಿಲ್ಲಾ. ನಮಗೇನು ಆಗಿಲ್ಲ, ನಾನು ದೂರು ನೀಡಿಲ್ಲ ಎಂದು ಹಲ್ಲೆಗೊಳಗಾದ ಸಿಬ್ಬಂದಿ ಸಂಗಪ್ಪ ಹೇಳಿದ್ದಾರೆ ಎನ್ನಲಾಗಿದೆ. ಇನ್ನೂ ಪುತ್ರನ ಬಗ್ಗೆ‌ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಸ್ಪಷ್ಟನೆ ನೀಡಿದ್ದು ಮಗನ ಮುಂದೆ ತಂದೆಗೆ ಬೈದ್ರೆ ಯಾರಿಗೆ ತಾನೇ ಸಿಟ್ಟು ಬರಲ್ಲಾ, ಟೋಲ್ ಸಿಬ್ಬಂದಿ ನನ್ನ ಮಗನ ಮುಂದೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ, ಆಗ ನನ್ನ ಮಗನ ಜೊತೆ ಇದ್ದವರು ಸಿಬ್ಬಂದಿಗೆ ಥಳಿಸಿದ್ದಾರೆ, ನಂತರ ನನ್ನ ಮಗ ಒಂದು ಬಾರಿ ಥಳಿಸಿದ್ದಾನೆ ಎಂದು ಸ್ಪಷ್ಟಪಡಿಸಿದ್ದಾರೆ.

ನನ್ನ ಮಗ ಮಾಡಿದ್ದು ತಪ್ಪು, ಸಿಬ್ಬಂದಿ ಕೂಡ ಆ ರೀತಿ ಮಾತನಾಡಿದ್ದು ತಪ್ಪು, ನನ್ನ ಮಗನಿಗೆ ಕ್ಷಮೆ ಕೇಳುವಂತೆ ಹೇಳಿದ್ದೇನೆ, ಅವನು ಕ್ಷಮೆ ಕೇಳದಿದ್ದರು ನಾನು ಕ್ಷಮೆ ಕೇಳ್ತೇನೆ, ಆದ್ರೆ ಈಗ ಇದರಲ್ಲಿ ರಾಜಕೀಯ ಎಂಟ್ರೀ ಆಗಿದೆ ಎಂದಿದ್ದಾರೆ. ಇದರಲ್ಲಿ ರಾಜಕಾರಣ ಬಂದಿರುವ ಕಾರಣ ಈ ಮಟ್ಟಕ್ಕೆ ಇದು ಬೆಳೆಯುತ್ತಿದೆ ಎಂದು ಆರೋಪಿಸಿದ್ದಾರೆ. ಇಬ್ಬರು ಪರಸ್ಪರ ಕ್ಷಮೇ ಕೇಳಿ ಪ್ರಕರಣ ಸುಖಾಂತ್ಯ ಮಾಡಲು ವಿಜುಗೌಡ ಪಾಟೀಲ್ ಸಲಹೆ ನೀಡಿದ್ದಾರೆ.

ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಮಗನ ತಪ್ಪಿಗೆ ಕ್ಷಮೆ ಕೇಳಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ರಾಜಕಾರಣ ನುಸುಳಿರುವದಕ್ಕೆ ಆಕ್ರೋಶವನ್ನು ಹೊರ ಹಾಕಿದ್ದಾರೆ. ಇದುವರೆಗೂ ಯಾವದೇ ದೂರು ದಾಖಲಾಗಿಲ್ಲಾ‌‌. ಸದ್ಯ ಪ್ರಕರಣವು ಸುಖಾಂತ್ಯವಾಗಿ ಬಗೆಹರಿಯುವ ಸಾಧ್ಯತೆಗಳಿವೆ.

ವಿಜಯಕುಮಾರ ಸಾರವಾಡ
ಇನ್ ನ್ಯೂಜ್
ವಿಜಯಪುರ.

Tags:

error: Content is protected !!