ಬೆಳ್ಳಂಬೆಳಗ್ಗೆ ನಡೆದ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಕೆ.ಬಿ. ಗ್ರಾಮದ ಜನರನ್ನು ಬೆಚ್ಚಿ ಬೀಳಿಸಿದೆ.

ಬೆಳಗಿನ ಜಾವ ನಡುರಸ್ತೆಯಲ್ಲಿ ಯುವಕನೊಬ್ಬನನ್ನು ಅಮಾನವೀಯವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ಮಂಜುನಾಥ ಗೌಡರ (32) ಎಂದು ಗುರುತಿಸಲಾಗಿದ್ದು, ಕೊಲೆ ಮಾಡಿದ ಆರೋಪಿ ದಯಾನಂದ ಗುಂಡ್ಲುರ ಎಂದು ತಿಳಿದು ಬಂದಿದೆ. ಈ ಭೀಕರ ಕೊಲೆಗೆ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಬೆಳಗ್ಗೆ ನಡೆದಿರುವ ಈ ಘಟನೆಯಿಂದಾಗಿ ಗಿರಿಯಾಲ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಯ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
