hubbali

ಆರ್.ಎಸ್.ಎಸ್. ಟೋಪಿಗೆ ಕರಿ ಟೋಪಿ ಅಂತೀರಾ?

Share

ಕಾಂಗ್ರೆಸ್ಸಿನವರು ಕರಿ ಟೋಪಿ ಎಂದು ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುತ್ತಾರೆ. ಮುಸ್ಲಿಂ ಹಾಕುವ ಟೋಪಿಗೆ ಜಾಲರಿ ಟೋಪಿ ಎಂದು ಕರೆಯಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಧೈರ್ಯ ಇದ್ದರೆ ಸಾಬರ್‌ ಹಾಕುವ ಟೋಪಿಗೆ ಜಾಲರಿ ಟೋಪಿ ಎನ್ನಲಿ. ಆ ರೀತಿ ಮಾತನಾಡಿದ್ರೆ ಸಾಬರು ಇವರನ್ನ ಆಡಳಿತ ಮಾಡಲು ಬಿಡಲ್ಲ ಎಂದು ಲೇವಡಿ ಮಾಡಿದರು.

ಗೊಂದಲದಿಂದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ

ಮುಖ್ಯಮಂತ್ರಿಗಳು ತಮಗೆ ಬೇಕಾದವರನ್ನ ಕರೆದು ಡಿನ್ನರ ಪಾರ್ಟಿ ಮಾಡ್ತಾ ಇದ್ದಾರೆ. ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಇದರಿಂದ ಅತ್ಯಾಚಾರ ಪ್ರಕರಣಗಳು ಹೆಚ್ಚಿವೆ ಎಂದರು.

ಅತಿವೃಷ್ಟಿಯಿಂದ ರೈತರು ಬೀದಿಗೆ ಬಂದಿದ್ದಾರೆ. ಆದ್ರೆ ಇಲ್ಲಿಯವರೆಗೂ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಗೊಂದಲದಿಂದ ಆಡಳಿತ ಯಂತ್ರ ಸಂಪೂರ್ಣ ಕುಸಿದ ಕಂಡಿದೆ ಎಂದರು. ವಯನಾಡ್‌ನಲ್ಲಿ ಆನೆ ತುಳಿತಕ್ಕೆ ಒಳಗಾದ ಕುಟುಂಬಕ್ಕೆ ಪರಿಹಾರ ನೀಡುತ್ತಾರೆ. ಆನೆ ನಮ್ಮದು ಎಂದು ಪರಿಹಾರ ನೀಡ್ತಾರೆ. ಆನೆ ಮೇಲೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಹೆಸರು ಬರೆಯಲಾಗಿದೆ ಏನೂ ಎಂದು ಜೋಶಿ ವ್ಯಂಗ್ಯವಾಡಿದರು.

Tags:

error: Content is protected !!