



ಮಕ್ಕಳಲ್ಲಿ ಶಿಕ್ಷಣದ ಮಹತ್ವನ್ನು ಭಿತ್ತರಿಸಿ ಅವರನ್ನು ಸಾಕ್ಷರರನ್ನಾಗಿ ಮಾಡಿದಾಗ ಮಾತ್ರ ದೇಶ ಪ್ರಗತಿ ಹೊಂದಲು ಸಾಧ್ಯವೆಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು. ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಇಂದು ಮುಜಾವರ ವೆಲ್ಫೇರ್ ಹಾಗೂ ಶೈಕ್ಷಣಿಕ ಸಮಿತಿ ಕುಡಚಿ ವತಿಯಿಂದ ಆಯೋಜಿಸಿದ್ದ ಮುಜಾವರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಶಿಕ್ಷಣದ ಮಹತ್ವವನ್ನು ಮಕ್ಕಳಲ್ಲಿ ಬಿತ್ತರಿಸುವ ಕಾರ್ಯವನ್ನು ಮಾಡಬೇಕು. ಸಮಾಜದ ಯುವಕರು ಜ್ಞಾನ, ಕೌಶಲ್ಯ ಮತ್ತು ನೈತಿಕ ಮೌಲ್ಯಗಳಲ್ಲಿ ಮುಂಚೂಣಿಯಲ್ಲಿರಲಿ, ಸಮಾಜದ ಪ್ರಗತಿಗೆ ದಾರಿದೀಪರಾಗಲಿ ಎಂದು ಹಾರೈಸಿದರು. ಈ ಸಂಸ್ಥೆಯೂ ಕಳೆದ ಹಲವಾರು ವರ್ಷಗಳಿಂದ ಶೈಕ್ಷಣಿಕ ಮತ್ತು ಸಾಮಾಜೀಕ ಉಪಕ್ರಮಗಳನ್ನು ಮಾಡುತ್ತ ಸಮಾಜವನ್ನು ಅಭಿವೃದ್ಧಿಗೊಳಿಸುವ ಕಾರ್ಯವನ್ನು ಮಾಡುತ್ತಿದೆ. ಎಲ್ಲರೂ ಪ್ರಗತಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು, ಈ ಭಾಗದ ಜನರೊಂದಿಗೆ ನಾವು ಕೂಡ ಇದ್ದು, ಇಲ್ಲಿನ ಜನರ ಕಷ್ಟಕ್ಕೆ ಸ್ಪಂದಿಸುತ್ತೇವೆ. ಶಿಕ್ಷಣವಿಲ್ಲವೆಂದರೇ, ಈಗೀನ ಕಾಲದಲ್ಲಿ ಯಾವುದೇ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಸಿಎಂ ಸಿದ್ಧರಾಮಯ್ಯನವರ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ. ವಿಶೇಷವಾಗಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದೆ. ಸರ್ವರಿಗೂ ಸಮಪಾಲು, ಸರ್ವರಿಗೆ ಸಮಬಾಳು ಎಂಬ ಧ್ಯೇಯದೊಂದಿಗೆ ಕಾಂಗ್ರೆಸ್ ಸರ್ಕಾರ ಎಲ್ಲರ ಏಳ್ಗೆಗಾಗಿ ಶ್ರಮಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಗೌರವಪೂರ್ವಕವಾಗಿ ಪ್ರಶಸ್ತಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮುಜಾವರ ವೆಲ್ಫೇರ್ ಹಾಗೂ ಶೈಕ್ಷಣಿಕ ಸಮಿತಿಯ ಅಧ್ಯಕ್ಷರು ಸಲೀಂ ಮುಜಾವರ ಕಾರ್ಯದರ್ಶಿ ಜೈನುಲ್ ಅಬದೀನ ಮುಜಾವರ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಮುಜಾವರ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
