9 ನೇ ತರಗತಿಯಲ್ಲಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿಪ್ಪಾಣಿಯಲ್ಲಿ ನಡೆದಿದೆ.
ನಿಪ್ಪಾಣಿಯ ಮಾನೆ ಪ್ಲಾಟನ ಆಜಾದ ಗಲ್ಲಿಯಲ್ಲಿ ಸಾದ ವಾಸಿಮ್ ಬಾಗವಾನ ಎನ್ನುವ ವಿದ್ಯಾರ್ಥಿ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಘಟನೆ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಘಟನಾ ಸ್ಥಳಕ್ಕೆ ನಿಪ್ಪಾಣಿ ನಗರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ತಿಳಿದು ಜನರು ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದರು.

 
			 
 
 
  
					 
				 
						  
						  
						  
						  
						 
						 
						