Kittur

ಕಿತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಟ್ ಆಂಡ್ ರನ್…

Share

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿ 48 ರ ಮೇಲೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸುಮಾರು ಪಾದಚಾರಿಯೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಧಾರವಾಡ ಕಡೆಯಿಂದ ಬೆಳಗಾವಿಯತ್ತ ವೇಗವಾಗಿ ಸಾಗುತ್ತಿದ್ದ ಅಪರಿಚಿತ ವಾಹನವೊಂದು ಹೆದ್ದಾರಿಯ ಮೇಲೆ ಬರುತ್ತಿದ್ದ ಪಾದಚಾರಿಗೆ ಅಪ್ಪಳಿಸಿದೆ. ಡಿಕ್ಕಿಯ ತೀವ್ರತೆಗೆ ಆ ವ್ಯಕ್ತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಅಪಘಾತಕ್ಕೆ ಕಾರಣವಾದ ವಾಹನ ನಿಲ್ಲಿಸದೇ ಪರಾರಿಯಾಗಿದೆ. ಮೃತಪಟ್ಟ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಹೆದ್ದಾರಿ ಮೇಲೆ ನಡೆದ ಈ ದುರ್ಘಟನೆಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನ ಹಾಗೂ ಅದರ ಚಾಲಕನನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸಾರ್ವಜನಿಕರು ಹೆದ್ದಾರಿ ಮೇಲೆ ಸಂಚರಿಸುವಾಗ ಎಚ್ಚರ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Tags:

error: Content is protected !!