Chikkodi

ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ ಚಿಕ್ಕೋಡಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ

Share

ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಚಿಕ್ಕೋಡಿ ತಾಲೂಕಿನ ಹಿರೇಕೊಡಿಯ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲಿಸಿದರು.

ಚಿಕ್ಕೋಡಿ ತಾಲೂಕಿನ ಹಿರೇಕೊಡಿಯ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು 50ಕ್ಕೂ ಅಧಿಕ ವಿದ್ಯಾರ್ಥಿಗಳು ವಿಷಾಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗಾವಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ

ಸಂದೀಪ್ ಪಾಟೀಲ್, ಚಿಕ್ಕೋಡಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಹರೀಶ್ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು.

Tags:

error: Content is protected !!