




ಖಾನಾಪೂರ ತಾಲೂಕಿನ ಕೊಡಚವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ಅರಿವು ಕೇಂದ್ರ ಗ್ರಂಥಾಲಯವನ್ನು ಶಾಸಕರಾದ ವಿಠ್ಠಲ ಹಲಗೇಕರ ಅವರು ಲೋಕಾರ್ಪಣೆಗೊಳಿಸಿದರು.
ಈ ಉದ್ಘಾಟನಾ ಸಮಾರಂಭದಲ್ಲಿ ಅವರೋಳಿ ರುದ್ರಸ್ವಾಮಿ ಮಠದ ಚನ್ನಬಸವ ದೇವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಬೆಳಗಾವಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ್ ಹಿಂಡಲಗಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಗ್ರಂಥಾಲಯಗಳು ಜ್ಞಾನದ ಕೇಂದ್ರಗಳಾಗಿದ್ದು, ಇವುಗಳ ಸದುಪಯೋಗವನ್ನು ವಿಶೇಷವಾಗಿ ಯುವ ಸಮುದಾಯ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು. ‘ಅರಿವು ಕೇಂದ್ರ’ವು ಗ್ರಾಮದ ವಿದ್ಯಾರ್ಥಿಗಳಿಗೆ ಮತ್ತು ನಾಗರಿಕರಿಗೆ ಜ್ಞಾನಾರ್ಜನೆಗೆ ಅತ್ಯುತ್ತಮ ವೇದಿಕೆಯಾಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.
ಹಿರಿಯರಾದ ಪ್ರಮೋದ್ ಕಚೇರಿ ಸೇರಿದಂತೆ ತಾಲೂಕಿನ ಅನೇಕ ಗಣ್ಯ ವ್ಯಕ್ತಿಗಳು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ಧರು.

 
			 
 
 
  
					 
				 
						  
						  
						 
						 
						