ಬೇರೆ ರಾಜ್ಯದ ಮಾದರಿಯಲ್ಲಿ ಕಬ್ಬಿಗೆ ದರ ನಿಗದಿ ಮಾಡಿ ಕಾರ್ಖಾನೆ ಆರಂಭಿಸಬೇಕು. ಅಲ್ಲಿಯ ವರೆಗೂ ಕಾರ್ಖಾನೆಗಳಿಗೆ ಕಬ್ಬು ಪೂರೈಸದಂತೆ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸನಲ್ಲಿ ರೈತರಿಂದ ರಸ್ತೆ ತಡೆದು ಸಾವಿರಾರು ರೈತರಿಂದ ಬೃಹತ್ ಪ್ರತಿಭಟನೆ ನಡೆಸಿದರು.
ಕಬ್ಬಿಗೆ ದರ ನಿಗದಿ ಮಾಡಿ ಕಾರ್ಖಾನೆ ಆರಂಭಿಸಬೇಕು. ಅಲ್ಲಿಯ ವರೆಗೂ ಕಾರ್ಖಾನೆಗಳಿಗೆ ಕಬ್ಬು ಪೂರೈಸದಂತೆ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸನಲ್ಲಿ ರೈತರಿಂದ ರಸ್ತೆ ತಡೆದು ಸಾವಿರಾರು ರೈತರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕಬ್ಬು ಬೆಳೆಗಾರರು ನಿರಂತರವಾಗಿ ಪ್ರತಿಭಟಿಸಿದರೂ ಅದನ್ನ ಗಂಭೀರವಾಗಿ ಪರಿಗಣಿಸಿ, ಕಬ್ಬಿನ ದರ ಘೋಷಿಸದೇ, ಕಾರ್ಖಾನೆಗಳನ್ನು ಪ್ರಾರಂಭಿಸಿ ಸಕ್ಕರೆ ಕಾರ್ಖಾನೆಯ ಮಾಲೀಕರು ಹಂಗಾಮು ಆರಂಭಿಸಿ ಮೊಂಡುತನ ಮೆರೆಯುತ್ತಿದ್ದಾರೆ. ಉಳಿದ ರಾಜ್ಯಗಳ ಮಾದರಿಯಲ್ಲಿ ಪ್ರತಿ ಟನ್ ಕಬ್ಬಿಗೆ ಯೋಗ್ಯ ದರ ನೀಡಬೇಕು. ಇಲ್ಲದ್ದಿದರೇ 1 ಲಕ್ಷ ರೈತರು ಸೇರಿ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದರು. ಕಾರ್ಖಾನೆಗಳು ಕೇವಲ 50 ರೂಪಾಯಿ ಹೆಚ್ಚಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಚೂನಪ್ಪ ಪುಜಾರಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಬ್ಬು ಬೆಳೆಗಾರರು ಭಾಗಿಯಾಗಿದ್ಧರು.

 
			 
 
 
  
					 
				 
						  
						  
						  
						 
						 
						