ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದ ಭಾರತೀಯ ಸೇನೆಯ ಯೋಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಾದಾಮಿ ತಾಲ್ಲೂಕಿನ ಸೋಮನಕೊಪ್ಪ ಗ್ರಾಮದ ನಿವಾಸಿ ಹಾಗೂ ಐದು ವರ್ಷಗಳ ಹಿಂದೆ ಸೇನೆಗೆ ಸೇರಿ, RRMEG ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಹನುಮಂತ ಹಟ್ಟಿ (26) ಮೃತಪಟ್ಟ ಯೋಧರಾಗಿದ್ದಾರೆ. ಹನುಮಂತ ಹಟ್ಟಿ ಅವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೆರೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

 
			 
 
 
  
					 
				 
						  
						  
						  
						  
						 
						 
						