ಬೆಳಗಾವಿ ನಗರ ಪೊಲೀಸರು ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಒಟ್ಟು 4 ಪ್ರಕರಣಗಳನ್ನು ದಾಖಲಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯ ವಡಗಾಂವದ ಜೈಲ್ ಸ್ಕೂಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ಪದಾರ್ಥಗಳನ್ನು ಸೇವಿಸಿ ಅಸಹಜವಾಗಿ ವರ್ತಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 15/11/2025 ರಂದು: ಚೇತನ ಜಗದೀಶ ಕಾರ್ಲೆಕರ, ದಿನಾಂಕ 16/11/2025 ರಂದು: ಪ್ರವೀಣ ಮನೋಹರ ನಾಯಕ ಮತ್ತು ದಿನಾಂಕ 15/11/2025 ರಂದು: ಸೂರಜ ಶಿವನಾಥ ಅನ್ವೇಕರ ಎಂಬ ಆರೋಪಿಗಳು ಮಾದಕ ಪದಾರ್ಥ ಸೇವನೆ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಶಹಾಪೂರ ಪೊಲೀಸ್ ಠಾಣೆಯ ಪಿಐ. ಎಸ್. ಎಸ್. ಶಿಮಾನಿ ಹಾಗೂ ಸಿಬ್ಬಂದಿಯವರು ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಅವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟಗಾರನ ಬಂಧನ
ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿನಾಂಕ 16/11/2025 ರಂದು: ಮಂಜುನಾಥ ಮಾರುತಿ ಕಾಶಿ (26 ಚಂದೂರ ಗ್ರಾಮದ ಹದ್ದಿಯಲ್ಲಿರುವ ಬೆಳಗಾವಿ-ಗೋಕಾಕ ರಸ್ತೆಯ ಪಕ್ಕದಲ್ಲಿರುವ ಭೂಮಿಕಾ ದಾಬಾ ಹಿಂದುಗಡೆ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಲೈಸನ್ಸ್ ಇಲ್ಲದೇ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಮಾರಿಹಾಳ ಪೊಲೀಸ್ ಠಾಣೆಯ ಸಿ ಪಿಎಸ್‌ಐ ಶ್ರೀ. ಚಂದ್ರಶೇಖರ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಅಂದಾಜು ರೂ. 3,000/- ಮೌಲ್ಯದ 20 ಲೀಟರ್ ಕಳ್ಳಭಟ್ಟಿ ಸಾರಾಯಿ ರೂ. 130/- ನಗದು ಸೇರಿಒಟ್ಟು ಮೌಲ್ಯ: ರೂ. 3,130/- ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಿ ತನಿಖೆ ಮುಂದುವರೆಸಲಾಗಿದೆ.ಪೊಲೀಸ್ ಆಯುಕ್ತರು, ಬೆಳಗಾವಿ ನಗರ ಹಾಗೂ ಡಿಸಿ ರವರುಗಳು ಈ ಯಶಸ್ವಿ ಕಾರ್ಯಾಚರಣೆ ಕೈಗೊಂಡ ಪಿಐ/ಪಿಎಸ್‌ಐ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಿರುತ್ತಾರೆ

