

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಕೂಟ ಬಾರಿ ಬಹುಮತ ದಿಂದ ಜಯ ಸಾಧಿಸಿದ ಹಿನ್ನಲೆಯಲ್ಲಿ ವಿಜಯಪುರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಗಾಂಧಿ ವೃತ್ತದಲ್ಲಿ ವಿಜಯೋತ್ಸವ ಆಚರಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ಸಂಸದರು ರಮೇಶ್ ಜಿಗಜಿಣಗಿ, ಮಾಜಿ ಸಚಿವರು ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷರು ಗುರುಲಿಂಗಪ್ಪ ಅಂಗಡಿ, ನಗರ ಮಂಡಲ ಅಧ್ಯಕ್ಷರು ಸಂದೀಪ್ ಪಾಟೀಲ್ ಝಳಕಿ, ಬಿಜೆಪಿ ಮುಖಂಡರು ಚಂದ್ರಶೇಖರ ಕವಟಗಿ, ಭೀಮಾಶಂಕರ ಹದನೂರ, ಉಮೇಶ್ ಕೊಳಕುರ , ಸಂಜಯ ಪಾಟೀಲ ಕನಮಡಿ ಮಹಾನಗರ ಪಾಲಿಕೆ ಸದಸ್ಯರಾದ, ಶಿವರುದ್ರ ಬಾಗಲಕೋಟ, ರಾಹುಲ ಜಾಧವ ಹಾಗೂ ಬಿಜೆಪಿ ಪ್ರಮುಖ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ ಕಾಂಗ್ರೆಸ್ ಪಕ್ಷದ ಸೋಲಿನ ಕುರಿತು ವ್ಯಂಗ್ಯವಾಡಿದರು. ಬಿಹಾರದಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಿದ್ದಾರೆ ಎಂದರು. ಇನ್ನೂ ಬೆಳೆ ಹಾನಿ ಪರಿಹಾರ ನೀಡದ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

