ಬೈಕ್ ಹಾಗೂ ಕಾರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ರಾಯಬಾಗ ತಾಲೂಕಿನ ಮುಗಳಖೋಡ ಬಳಿ ನಡೆದಿದೆ.
ರಾಯಬಾಗ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಕಾರ್ ಹಾಗೂ ಬೈಕ್ ಮುಖಾ-ಮುಖಿ ಡಿಕ್ಕಿಯಾಗಿದ್ದು.ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಚಿಕ್ಕೋಡಿ ತಾಲೂಕಿನ ತಾಲೂಕಿನ ವಡಗೋಲ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕಾರ್ಯನಿರ್ವಾಹಿಸುತ್ತಿದ್ದ ಗಣಪತಿ ಹಾಗೂ ಆತನ ಸ್ನೇಹಿತ ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದ ಭೀಕರ ದೃಶ್ಯ ಸ್ಥಳೀಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಹಾರೋಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

