
ಬಿಹಾರ್ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ವಿಜಯೋತ್ಸವವನ್ನು ಆಚರಿಸಿದರು.
ಬಿಹಾರ್ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ ಹಿನ್ನೆಲೆ ಇಂದು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿದರು. ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ಜಗಜ್ಯೋತಿ ಬಸವೇಶ್ವರರ ಅಶ್ವಾರೂಢ ಮೂರ್ತಿಗೆ ಮಾಲಾರ್ಪಣೆಯನ್ನು ಮಾಡಿದರು. ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ನಂತರ ಸಾರ್ವಜನಿಕರಿಗೆ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಲಾಯಿತು.

