ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಪೇಟ್ಲೂರ ಕ್ರಾಸ್ ಬಳಿ ಇಂದು ಭೀಕರ ಅಪಘಾತವೊಂದು ಸಂಭವಿಸಿದ್ದು, ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ವೇಗವಾಗಿ ಬಂದ KSRTC ಬಸ್, ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸುವ ಯತ್ನದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ವಾಲಿದೆ.
ಈ ಘಟನೆಯಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಆತಂಕ ಮನೆ ಮಾಡಿತ್ತು. ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಈ ದುರ್ಘಟನೆಯಲ್ಲಿ ಬಸ್‌ನಲ್ಲಿದ್ದ ವೃದ್ಧರು ಮತ್ತು ಪುಟ್ಟ ಮಕ್ಕಳು ಸೇರಿದಂತೆ ಹಲವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ರಕ್ಷಿಸುವ ಕಾರ್ಯದಲ್ಲಿ ನೆರವಾದರು. ತಕ್ಷಣ ಅಂಬುಲೆನ್ಸ್‌ಗಳ ಮೂಲಕ ಎಲ್ಲ ಗಾಯಾಳುಗಳನ್ನು ಮುಧೋಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೈಕ್ ಸವಾರನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದು, ಈ ಕುರಿತು ಲೋಕಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ

