ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಧಾನ ಅಧ್ಯಕ್ಷರಾದ ಪರಮಪೂಜ್ಯ ಡಾ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಪ್ರಯುಕ್ತವಾಗಿ ತಿಗಡಿ ವಲಯದ ತಿಗಡಿ ಒಕ್ಕೂಟದ ವತಿಯಿಂದ ತಿಗಡಿ ಸರ್ಕಾರಿ ಉರ್ದು ಶಾಲೆಯ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಪೆನ್‌ಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರು ಶ್ರೀ ಲಾರ್ಡ್ ಖಾನ್ ಅಥನಿ, ಪತ್ರಕರ್ತ ಶಾನೂಲ ಮತ್ತೆಖಾನ, ಸಹ ಶಿಕ್ಷಕಿಯರಾದ ನಹಿದ ಮೋಮಿನ್ ಹಾಗೂ ನಾಜಿಯಾ ಮನಿಯಾಲ್, ಒಕ್ಕೂಟದ ಅಧ್ಯಕ್ಷ ಜಯರಾಭಿ ನದಾಫ್, ಜಯ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯ ಮಂಜುನಾಥ ದೊಡ್ಡಮನಿ, ವಲಯ ಮೇಲ್ವಿಚಾರಕ ಹಾಲಪ್ಪ ಮಿರ್ಜಿ, ಸ್ಥಳೀಯ ಸೇವಾ ಪ್ರತಿನಿಧಿ ಗಂಗಾ ಹೊಂಗಲ ಮತ್ತು ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಉರ್ದು ಶಾಲೆಯ ಮುಖ್ಯಗುರುಗಳು, ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪರಮಪೂಜ್ಯ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ವಲಯ ಮೇಲ್ವಿಚಾರಕ ಹಾಲಪ್ಪ ಮಿರ್ಜಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಸಂಸ್ಥೆಯು ತುಂಬಾನೇ ಬಡ ವಿದ್ಯಾರ್ಥಿಗಳಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಹಸ್ತ ಮಾಡುತ್ತಾ ಬಂದಿದೆ
ಪ್ರತಿವರ್ಷದಂತೆ ಈ ವರ್ಷವೂ ಕೂಡ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಕೂಡ ನೀಡುತ್ತಿದೆ
ಸಾಕಷ್ಟು ಕಡೆಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ಆ ಕೊರತೆಯನ್ನು ಹೋಗಲಾಡಿಸಲು ಧರ್ಮಸ್ಥಳದ ಗ್ರಾಮ ಅಭಿವೃದ್ಧಿ ಸಂಸ್ಥೆಯು ಜ್ಞಾನ ದೀಪ ಎಂಬ ಕಾರ್ಯಕ್ರಮದ ಅಡಿಯಲ್ಲಿ ಜ್ಞಾನ ದೀಪ ಶಿಕ್ಷಕರನ್ನು ನೇಮಕ ಮಾಡಿ ಅವರಿಗೆ ಶ್ರೀ ಧರ್ಮಸ್ಥಳ ಸಂಸ್ಥೆ ವತಿಯಿಂದ ವೇತನ ನೀಡಿ ಸರ್ಕಾರಿ ಶಾಲೆಯ ಮಕ್ಕಳಿಗೆ ಶಿಕ್ಷಕರ ಕೊರತೆ ಆಗದಂತೆ ನೋಡಿಕೊಳ್ಳುತ್ತಿದೆ ಎಂದು ಹೇಳಿದ್ದರು
