ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಡಲೆಕೊಪ್ಪ ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿತ್ತು. ಕೂಡಲೇ ಸ್ಥಳೀಯರು 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಗ್ರಾಮಸ್ಥರ ಕರೆಯ ಮೇರೆಗೆ ತಕ್ಷಣವೇ ಸ್ಥಳಕ್ಕೆ ಧಾವಿಸಿದ ರಾಮದುರ್ಗ ಪೊಲೀಸ್ ಠಾಣೆಯ ಸಿಬ್ಬಂದಿಗಳು, ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲೇ ಹೆಬ್ಬಾವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಾಹಸಮಯ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ ಪೊಲೀಸ್ ಸಿಬ್ಬಂದಿ ಪ್ರಕಾಶ್ ಗಾಡಿವಡ್ಡರ ಅವರ ಕಾರ್ಯಕ್ಕೆ ಎಲ್ಲರ ಪ್ರಶಂಸೆ ವ್ಯಕ್ತವಾಗಿದೆ.
ರಾಮದುರ್ಗ ಪೊಲೀಸ್ ಠಾಣೆ ಸಮೀಪದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬೃಹತ್ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದ ನಂತರ ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಪೊಲೀಸ್ ಸಿಬ್ಬಂದಿಯ ಈ ದಿಟ್ಟತನದಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

