ಖಾನಾಪೂರ ತಾಲೂಕಿಗೆ ನೂತನವಾಗಿ ಆಗಮಿಸಿರುವ ತಹಶೀಲ್ದಾರ್ ಮಂಜುಳಾ ನಾಯಕ ಅವರನ್ನು ಖಾನಾಪೂರ ಯುವ ಕಾಂಗ್ರೆಸ್ ಸಿಟಿ ಅಧ್ಯಕ್ಷ ಮತ್ತು ಖಾನಾಪೂರ ತಾಲೂಕಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಇಸಾಕ್ ಖಾನ್ ಪಠಾಣ್ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು ಈ ಸಂದರ್ಭದಲ್ಲಿ ಖಾನಾಪೂರ ಮಂಜುಳಾ ನಾಯಕ ಅವರು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಯೋಜನೆಗಳ ಕುರಿತು ಇಸಾಕ್ ಖಾನ್ ಪಠಾಣ್ ಅವರಿಂದ ಮಾಹಿತಿ ಪಡೆದುಕೊಂಡರು ಜನಸಾಮಾನ್ಯರಿಗೆ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡಿ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಪಾರದರ್ಶಕತೆಯಿಂದ ನೀಡುವ ಕಾರ್ಯ ಮಾಡೋಣಾ ಎಂದರು ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಎಮ್.ಕೆ.ಸಂಗೋಳ್ಳಿ, ವಶೀಮ್ ಮುಜಾವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

