ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಶಿಡ್ಲಘಟ್ಟ ತಾಲೂಕಿನ ಹನುಮಂತ ಪುರದಲ್ಲಿ ನಡೆದ “ಚಿಕ್ಕಬಳ್ಳಾಪುರ ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ವಿವಿಧ ಕಾಮಗಾರಿಗಳ ಉದ್ಘಾಟನೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾದರು.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಶಿಡ್ಲಘಟ್ಟ ತಾಲೂಕಿನ ಹನುಮಂತ ಪುರದಲ್ಲಿ ನಡೆದ “ಚಿಕ್ಕಬಳ್ಳಾಪುರ ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್. ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮ”ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು. ಸುಮಾರು 2000 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನೀಡಲಾಯಿತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಲವು ಸಚಿವ ಸಂಪುಟ ಸದಸ್ಯರು, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು
