ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವತಿಯಿಂದ ನಿರ್ಮಿಸಲಾದ ಕಾರ್ಯ ಮತ್ತು ಪಾಲನಾ ಬೆಳಗಾವಿ ನಗರ ವಿಭಾಗದ ನೂತನ ಕಚೇರಿಯ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು.

ಬೆಳಗಾವಿಯ ನೆಹರು ನಗರದಲ್ಲಿ ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವತಿಯಿಂದ ನಿರ್ಮಿಸಲಾದ ಕಾರ್ಯ ಮತ್ತು ಪಾಲನಾ ನಗರ ವಿಭಾಗದ ನೂತನ ಕಚೇರಿಯ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮಪೀರ್ ಖಾದ್ರಿ, ಉತ್ತರ ಶಾಸಕ ಆಸೀಫ್ ಸೇಠ್, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಇನ್ನುಳಿದ ಗಣ್ಯರು ಉದ್ಘಾಟಿಸಿದರು.
ನಂತರ ಒಳಪ್ರವೇಶಿಸಿ ಕಟ್ಟಡವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ಧರು.
