ರಾಜ್ಯ ಸರ್ಕಾರ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ನಿರ್ಮಾಣ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿ ವಿಜಯಪುರ ನಗರದಲ್ಲಿ ಮಹಿಳೆಯರು ಮಂಗಳವಾರ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ವೃತ್ತಗಳಲ್ಲಿ ರಂಗೋಲಿ ಬಿಡಿಸಿ,

ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಈ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಸಿದ್ದೇಶ್ವರ ದೇವಸ್ಥಾನ, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ ಸೇರಿದಂತೆ 25 ಕಡೆಗಳಲ್ಲಿ ರಂಗೋಲಿ ಬಿಡಿಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು

