Belagavi

ಕಂಗ್ರಾಳಿ ಬಿಕೆ ಗ್ರಾಮದಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Share

ಬೆಳಗಾವಿ: ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ 41 ವರ್ಷದ ನಂತರ ನಡೆಯಲಿರುವ ಶ್ರೀ ಮಹಾಲಕ್ಷ್ಮೀ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ವಿವಿಧ ರಸ್ತೆಗಳ‌ ಸುಧಾರಣೆಯ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನಾನೇ ಜವಾಬ್ದಾರಿ ತೆಗೆದುಕೊಂಡು ಜಾತ್ರೆಯನ್ನು ಸುಸೂತ್ರವಾಗಿ ನಡೆಸಿಕೊಡುತ್ತೇನೆ ಎಂದು ಹೇಳಿದರು.
ಜಾತ್ರೆಗೆ ಮೊದಲು ರಸ್ತೆ ಮತ್ತು ಚರಂಡಿಗಳನ್ನು ಸುಧಾರಣೆ ಮಾಡಲಾಗುವುದು, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು, ಹೆಸ್ಕಾಂ, ಸಾರಿಗೆ, ಆರೋಗ್ಯ, ಪೊಲೀಸ್ ಸೇರಿದಂತೆ ಎಲ್ಲ ಇಲಾಖೆಯಗಳಿಂದ ಅಗತ್ಯ ಕೆಲಸಗಳನ್ನು ಮಾಡಿಕೊಡಲಾಗುವುದು. ಇದು ನನ್ನ ಗ್ರಾಮ, ಚುನಾವಣೆ ಸಂದರ್ಭದಲ್ಲಿ ಮಾತ್ರ ಅಲ್ಲ, ಎಂದಿದ್ದರೂ ನಾನು ನಿಮ್ಮ ಮನೆ ಮಗಳು. ಹಾಗಾಗಿ ಜಾತ್ರೆಯನ್ನು ಅತ್ಯಂತ ವಿಜ್ರಂಭಣೆಯಿಂದ, ಭಕ್ತಿಯಿಂದ, ಸುರಕ್ಷಿತವಾಗಿ ಆಚರಿಸೋಣ ಎಂದು ಸಚಿವರು ಹೇಳಿದರು.

ಗ್ರಾಮದಲ್ಲಿ ಈವರೆಗೆ 22 ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಕಾಮಗಾರಿ ನಡೆಸಲಾಗಿದೆ. ಗ್ರಾಮದ ಕೆಲಸವಿರಲಿ, ವಯಕ್ತಿಕ ಕೆಲಸವಿರಲಿ, ಎಲ್ಲವನ್ನೂ ಮಾಡಿಕೊಡುತ್ತಿದ್ದೇನೆ. ರಾಜಕಾರಣ ಬದಿಗಿಟ್ಟು ನಾನು ಕ್ಷೇತ್ರದ ಪ್ರತಿಯೊಂದು ಕೆಲಸದಲ್ಲಿ ತೊಡಗಿಕೊಂಡಿದ್ದೇನೆ. ಸಹೋದರ ಚನ್ನರಾಜ ಹಟ್ಟಿಹೊಳಿ, ಪುತ್ರ ಮೃಣಾಲ ಹೆಬ್ಬಾಳಕರ್ ಸಹ ಕ್ಷೇತ್ರದ ಜನರ ಕಷ್ಟಕ್ಕೆ ನಿರಂತರ ಸ್ಪಂದಿಸುತ್ತಿದ್ದಾರೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ನಿಮ್ಮ ಜೊತೆ ನಿರಂತರ ನಾನಿದ್ದೇನೆ ಎಂದು ಅವರು ಭರವಸೆ ನೀಡಿದರು.

ಈ ವೇಳೆ ಪಂಚಾಯತ್ ಅಧ್ಯಕ್ಷರಾದ ರೋಹಿಣಿ ನಾಥಬುವಾ, ಉಪಾಧ್ಯಕ್ಷರಾದ ದೀಪಾ ನಾಥಬುವಾ, ಜಯರಾಮ ಪಾಟೀಲ, ಮಾರುತಿ ಪಾಟೀಲ, ಸದೆಪ್ಪ ರಾಜಕಟ್ಟಿ, ಅನಿಲ ಪಾವಸೆ, ದತ್ತಾ ಪಾಟೀಲ, ಉಮೇಶ ಪಾಟೀಲ, ದಾದಾಸಾಹೇಬ್ ಬದರಗಡೆ, ಮಲ್ಲೇಶಿ ಬುಡ್ರೆನೂರ್, ನವನಾಥ್ ಪೂಜಾರಿ, ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.

Tags:

error: Content is protected !!