ರಾಜ್ಯ ಸರಕಾರ ಕಿತ್ತೂರು ಕರ್ನಾಟಕಕ್ಕೂ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ನ.11 ರಂದು ಸುವರ್ಣಸೌಧದ ಬಳಿ ಒಂದು ದಿನದ ಸಾಂಕೇತಿಕ ಧರಣಿ ನಡೆಸಲಾಗಯವುದು ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಅಶೋಕ ಪೂಜಾರಿ ಹೇಳಿದರು.
ಬುಧವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕರ್ನಾಟಕ ರಾಜ್ಯ ರಚನೆಯಾದ ಬಳಿಕ ಉತ್ತರ ಕರ್ನಾಟಕದ ಅಭಿವೃದ್ಧಿಯಾಗಿಲ್ಲ. ಕಳೆದ 15 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಯಾವ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕ ಅಭಿವೃದ್ಧಿ ಮಾಡುವಲ್ಲಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದರು.
ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿದ ಒಂದೂವರೆ ದಶಕ ಕಳೆದರೂ ಇಲ್ಲಿಯವರೆಗೂ ಬೆಂಗಳೂರಿನಲ್ಲಿರುವ ಸೆಕ್ರೆಟರಿ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವೇಗ ಕೊಡಬೇಕು. ಈ ನಿಟ್ಟಿನಲ್ಲಿ ನಮ್ಮ ಭಾಗದ ಸಚಿವ, ಶಾಸಕರು ಧ್ವನಿ ಎತ್ತುವ ಕೆಲಸ ಮಾಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಮಾತನಾಡಿ, ಇತ್ತೀಚೆಗೆ ಸರಕಾರದ ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ಹಿತ ದೃಷ್ಟಿಯಿಂದ ರಾಜ್ಯ ಸರಕಾರ ಪ್ರತ್ಯೇಕ ಸಚಿವಾಲಯ ನಿರ್ಮಾಣ ಮಾಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಬೇಕು ಬೇಡಿಕೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿರುವುದು ಶ್ಲಾಘನೀಯ. ಆದರೆ ಕಿತ್ತೂರು ಕರ್ನಾಟಕದಲ್ಲಿ ಸುವರ್ಣ ವಿಧಾನಸೌಧಕ್ಕೆ ಸೆಕ್ರೆಟರಿ ಮಟ್ಟದ ಕಚೇರಿಯನ್ನು ಸ್ಥಳಾಂತರ ಮಾಡಬೇಕೆಂದು ಒತ್ತಾಯಿಸಿದರು.
ವಿರುಪಾಕ್ಷಯ್ಯ ನೀರಲಗಿಮಠ, ಎಂ.ವಿ.ಹಿರೇಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

