ಹುಬ್ಬಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನ ಹನ್ನೆರಡನೇ ಶತಮಾನದಲ್ಲಿ ನಿರ್ಮಾಣವಾಗಿರುವ ದೇವಸ್ಥಾನ. ವಿಶೇಷ ಕಾರಿಡಾರ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿತ್ತು. ಈ ನಿಟ್ಟಿನಲ್ಲಿ ಫಿಟಿಷನ್ ಕಮೀಟಿಯ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಸಭೆ ನಡೆಯಲಿದೆ. ಚಂದ್ರಮೌಳೇಶ್ವರ ದೇವಸ್ಥಾನ ಡಿಪಿಆರ್ ಗೆ ಸಿದ್ಧವಾಗಿದ್ದು, ಬಹುತೇಕ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಎರಡು ಮೂರು ಸರ್ವೇಗಳು ನಡೆದಿವೆ. 25 ಕೋಟಿ ವೆಚ್ಚದ ಡಿಪಿಆರ್ ಸಿದ್ಧಗೊಂಡಿದ್ದು, ಉಪ ಸಭಾಪತಿ ರುದ್ರಪ್ಪ ಲಮಾಣಿ ನೇತೃತ್ವದಲ್ಲಿ ಫಿಟಿಷನ್ ಕಮಿಟಿ ಹುಬ್ಬಳ್ಳಿಯಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳುತ್ತಿರುವುದು ವಿಶೇಷವಾಗಿದೆ ಎಂದರು.
25 ಕೋಟಿಯಲ್ಲಿ 18 ಕೋಟಿ ಶಿಫ್ಟಿಂಗ್ ಹಾಗೂ 7 ಕೋಟಿ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತದೆ. ಈಗಾಗಲೇ ಸ್ಥಳೀಯರ ಬಗ್ಗೆ ಸಮಾಲೋಚನೆ ನಡೆಸಿದ್ದು, ಸ್ಥಳಾಂತರದ ಬಗ್ಗೆ ಯಾರೂ ಕೂಡ ವಿರೋಧ ವ್ಯಕ್ತಪಡಿಸಿಲ್ಲ. ಈ ನಿಟ್ಟಿನಲ್ಲಿ ಬೇರೆ ಕಡೆಯಲ್ಲಿ ವ್ಯವಸ್ಥೆ ಮಾಡುವ ಬಗ್ಗೆ ಕೂಡ ಫಿಟಿಷನ್ ಕಮಿಟಿ ಗಮನಕ್ಕೆ ತಂದಿದ್ದೇನೆ ಎಂದು ಅವರು ಹೇಳಿದರು.

