Bagalkote

ಮುಧೋಳದಲ್ಲಿ ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ

Share

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಕಬ್ಬು ಬೆಳೆಗಾರ ರೈತರ ಅಸಮಾಧಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸರ್ಕಾರಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಬಂದ್‌ಗೊಳಿಸುತ್ತಿರುವ ರೈತರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಧೋಳ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ಅಲ್ಲಿಂದ ಕೃಷಿ ಇಲಾಖೆ ಕಚೇರಿಯಿಂದ PWD ಕಚೇರಿಯವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ.ರೈತರು ಸುಮಾರು ಎರಡು ಕಿಲೋಮೀಟರ್ ಪಾದಯಾತ್ರೆ ನಡೆಸಿ ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಉದ್ದೇಶದಿಂದ ಮುಂದೆ ಸಾಗುತ್ತಿದ್ದಾರೆ.PWD ಕಚೇರಿಗೆ ನುಗ್ಗಿದ ರೈತರು,
ಕಚೇರಿಯ ಬಾಗಿಲಿಗೆ ಬೀಗ ಹಾಕಿ ಅಧಿಕಾರಿಗಳನ್ನು ಹೊರಗೆ ಬರಲು ಎಚ್ಚರಿಕೆ ನೀಡಿದ್ದಾರೆ. ಅಧಿಕಾರಿಗಳು ಭಯದಿಂದ ಕಚೇರಿ ಒಳಗೆ ಬೀಗ ಹಾಕಿಕೊಂಡಿರುವ ಘಟನೆ ವರದಿಯಾಗಿದೆ.ಕ್ಷಣ ಕ್ಷಣಕ್ಕೂ ಪ್ರತಿಭಟನೆಯ ತೀವ್ರತೆ ಹೆಚ್ಚುತ್ತಿದೆ.

Tags:

error: Content is protected !!