ಬಿಹಾರ ಚುನಾವಣೆಯಲ್ಲಿ ಲೆಕ್ಕಾಚಾರ ತಪ್ಪಿದ ಹಿನ್ನೆಲೆಯ ನಾವು ವಿಫಲರಾಗಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಭಾನುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಹಾರ ಚುನಾವಣೆಯ ಮಹಾಘಟಬಂಧನ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ ಎನ್ನುವ ವಿಶ್ವಾಸ ಇತ್ತು. ಆದರೆ ಕೆಲವೊಂದು ಕಾರಣಗಳಿಂದ ಸೋಲಾಗಿದೆ ಎಂದರು.ಇವಿಎಂ ಮಷಿನ್ ಬಗ್ಗೆ ಎಲ್ಲರಿಗೂ ಅನುಮಾನ ಇದೆ. ಇದನ್ನು ಕೇಂದ್ರ ಸರಕಾರ ಹಾಗೂ ಚುನಾವಣಾ ಆಯೋಗ ಸ್ಪಷ್ಟಿಕರಣ ನೀಡಿ ಇತಿಶ್ರೀ ಮಾಡಬೇಕು ಎಂದರು.
ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವು ಪಟ್ಟಿವೆ. ಅವುಗಳಿಗೆ ಯಾವುದೋ ರೋಗ ಬಂದು ಮೃತಪಟ್ಟಿವೆ ಎಂದು ಪ್ರಾಥಮಿಕ ತನಿಖೆ ನಡೆಸಲಾಗುತ್ತಿದೆ. ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಅವರು ತನಿಖೆಗೆ ಆದೇಶ ಹೊರಡಿಸಿದ್ದಾರೆ. ತನಿಖೆ ನಡೆದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.
ಕೆಪಿಸಿಸಿ ಅಧ್ಯಕ್ಷ ಆಯ್ಕೆಯ ವಿಚಾರಕ್ಕೆ ಉತ್ತರಿಸಿದ ಅವರು, ರಾಜ್ಯ ರಾಜಕಾರಣದ ಸಲುವಾಗಿ ನಾವು ಹೈಕಮಾಂಡ್ ಭೇಟಿಯಾಗಿಲ್ಲ. ನಾನು ಕೆಪಿಸಿಸಿ ಅಧ್ಯಕ್ಷರಾಗುತ್ತೇನೆ ಎನ್ನುವ ಚರ್ಚೆಗೆ ಕಡಿವಾಣ ಹಾಕಲು ಸಾಧ್ಯವಿಲ್ಲ ಎಂದು ಉತ್ತರಿಸಿದರು. ಅಧಿವೇಶನದ ಪೂರ್ವ ಸಿದ್ಧತೆ ಮಾಡಲಾಗುತ್ತಿದೆ. ವಸತಿ, ಪೊಲೀಸ್ ಬಂದೋಬಸ್ತ ಮಾಡಲಾಗುವುದು. ಕಬ್ಬಿನ ಬೆಲೆ, ಗೋವಿನ ಜೋಳ, ಸೋಯಾಬಿನ್ ಬೆಳೆಗಾರರ ಹೋರಾಟ ನಡೆಯಬಹುದು. ಅವರ ಬೇಡಿಕೆಯನ್ನು ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದರು. ಕಾಗವಾಡ ಶಾಸಕ ರಾಜು ಕಾಗೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಹೇಳಿಕೆ ನೀಡಿದ್ದು ಅವರು ಅವರ ವೈಯಕ್ತಿಕ. ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದರು.
ಇನ್ನೂ ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ ನಾಗನೂರು ರುದ್ರಾಕ್ಷಿ ಮಠದ ಲಿಂ. ಡಾ. ಶಿವಬಸವ ಸ್ವಾಮೀಜಿ ನಾಮಕರಣ ಮಾಡುವ ಕುರಿತು ರಾಜ್ಯ ಸರಕಾರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದೆ. ಮಾಡುವುದು, ಅದನ್ನು ಅಂಗೀಕಾರ ಮಾಡುವುದು ಕೇಂದ್ರ ಸರಕಾರಕ್ಕೆ ಬಿಟ್ಟಿದ್ದು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

