ಶತಮಾನದ ಸಂತ ಶ್ರೀ ಸಿದ್ದೇಶ್ವರ ಶ್ರೀಗಳ ನಮನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಸಿದ್ದೇಶ್ವರ ಶ್ರೀಗಳ ಮೂರನೇ ಪುಣ್ಯಸ್ಮರಣೆ ಅಂಗವಾಗಿ 330 ಜೋಡಿ ಎತ್ತುಗಳ ಮೆರವಣಿಗೆಯು ಅದ್ದೂರಿಯಾಗಿ ನಡೆಯಿತು.


ಗ್ರಾಮದ ಬಸವೇಶ್ವರ ವೃತ್ತದಿಂದ ರಾಮಲಿಂಗೇಶ್ವರ ಪುಣ್ಯಕ್ಷೇತ್ರದವರೆಗೆ ನಡೆದ ಈ ಮೆರವಣಿಗೆಯಲ್ಲಿ ಮಹಿಳೆಯರು ಮತ್ತು ನಂದಿ ಸೇನೆಯ ಮುಖಂಡರು ಸಿದ್ದೇಶ್ವರ ಶ್ರೀಗಳಿಗೆ ನಮನ ಸಲ್ಲಿಸಿದರು. ಇನ್ನೂ ಜೋಡೆತ್ತುಗಳ ಜಾಗೃತಿ ಕಾರ್ಯಕ್ರಮವನ್ನು ರೈತ ಸಂಘದ ರಾಜ್ಯಾಧ್ಯಕ್ಷ ಚಿನ್ನಪ್ಪ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜೋಡೆತ್ತುಗಳು ನಶಿಸಿ ಹೋಗುತ್ತಿದ್ದು, ಅವುಗಳ ರಕ್ಷಣೆ ಪ್ರತಿಯೊಬ್ಬ ರೈತನ ಕರ್ತವ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರೈತರು, ಗ್ರಾಮದ ಮುಖಂಡರು ಹಾಗೂ ಮಠಾಧೀಶರು ಪಾಲ್ಗೊಂಡಿದ್ದರು.
